- Advertisement -
- Advertisement -
ಪುತ್ತೂರು: ಲಾಡ್ಜ್ನಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಮೂವರು ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿರುವ ಘಟನೆ ನಡೆದಿದೆ.
ಕಡಬದ ಕೊಯಿಲ ನಿವಾಸಿ ಮಹಮ್ಮದ್ ರಿಫಾಯಿ (27) ಹಲ್ಲೆಗೊಳಗಾದ ಯುವಕ.
ಇವರು ಪುತ್ತೂರಿನ ಲಾಡ್ಜ್ವೊಂದರಲ್ಲಿ ಕೆಲಸ ಮಾಡುತ್ತಿದ್ದರು. ರಾತ್ರಿ ಲಾಡ್ಜ್ನಲ್ಲಿದ್ದ ವೇಳೆ ಅಲ್ಲಿಗೆ ಬಂದ ಫಾರೂಕ್, ಸೋನು ಮತ್ತು ಇಷಾನ್ ಎಂಬವರು ಅವಾಚ್ಯವಾಗಿ ನಿಂದಿಸಿ, ಜೀವ ಬೆದರಿಕೆ ಹಾಕಿ ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಈ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
- Advertisement -


