Monday, October 19, 2026
Homeಆರಾಧನಾಉಚ್ಚಿಲ ದಸರಾ ಶೋಭಾಯಾತ್ರೆ: ಅ.21ರಂದು ಹೆದ್ದಾರಿಯಲ್ಲಿ ಘನ ವಾಹನ ಸಂಚಾರ ನಿರ್ಬಂಧ

ಉಚ್ಚಿಲ ದಸರಾ ಶೋಭಾಯಾತ್ರೆ: ಅ.21ರಂದು ಹೆದ್ದಾರಿಯಲ್ಲಿ ಘನ ವಾಹನ ಸಂಚಾರ ನಿರ್ಬಂಧ

- Advertisement -
- Advertisement -

ಉಡುಪಿ: ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಉಡುಪಿ ಉಚ್ಚಿಲ ದಸರಾ–2026ರ ಸಮಾರೋಪದ ಅಂಗವಾಗಿ ಅಕ್ಟೋಬರ್ 21ರಂದು ಬೃಹತ್ ಶೋಭಾಯಾತ್ರೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಘನ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.

ಅಂದು ಮಧ್ಯಾಹ್ನ 3ರಿಂದ ರಾತ್ರಿ 11ರವರೆಗೆ ಉಡುಪಿ–ಮಂಗಳೂರು ಮಾರ್ಗದಲ್ಲಿ ಘನ ವಾಹನಗಳ ಸಂಚಾರ ನಿಷೇಧಿಸಲಾಗಿದೆ. ಈ ವಾಹನಗಳು ಕಟಪಾಡಿ–ಶಿರ್ವ–ಬೆಳ್ಳಣ್–ಪಡುಬಿದ್ರಿ ಪರ್ಯಾಯ ಮಾರ್ಗವನ್ನು ಬಳಸುವಂತೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಆದೇಶಿಸಿದ್ದಾರೆ.

ಮಂಗಳೂರು ವಿಮಾನ ನಿಲ್ದಾಣಕ್ಕೆ ತೆರಳುವ ವಾಹನಗಳು ಕಟಪಾಡಿ–ಶಿರ್ವ–ಬೆಳ್ಳಣ್–ಮುಂಡೂರು ಮಾರ್ಗದಲ್ಲಿ ಸಂಚರಿಸಬೇಕು. ಟ್ರಕ್, ಲಾರಿ ಹಾಗೂ ಟ್ಯಾಂಕರ್‌ಗಳು ರಾತ್ರಿ 9ರವರೆಗೆ ಕುಂದಾಪುರ ಮತ್ತು ಉಡುಪಿ ಭಾಗಗಳಲ್ಲಿನ ಟ್ರಕ್ ಬೇಗಳಲ್ಲಿ ನಿಲುಗಡೆ ಮಾಡಬೇಕು. ಬಳಿಕ ಸಂಚಾರ ಮುಂದುವರಿಸಬಹುದು.

ಉಡುಪಿಯಿಂದ ಮಂಗಳೂರು ಮಾರ್ಗವಾಗಿ ಬೆಂಗಳೂರಿಗೆ ತೆರಳುವ ರಾತ್ರಿ ಪ್ರಯಾಣಿಕರ ಬಸ್‌ಗಳು ರಾತ್ರಿ 9ರ ಬಳಿಕ ಸಂಚರಿಸಬೇಕು. ಆದರೆ ವಿವಿಐಪಿ, ಸರ್ಕಾರಿ ಹಾಗೂ ತುರ್ತು ಸೇವಾ ವಾಹನಗಳಿಗೆ ಈ ನಿರ್ಬಂಧ ಅನ್ವಯಿಸುವುದಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

- Advertisement -

Latest News

error: Content is protected !!