- Advertisement -
- Advertisement -
ಮಂಗಳೂರು: ಮಂಗಳೂರು ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರು ಅಕ್ಟೋಬರ್ 20ರಂದು ಮಂಗಳೂರಿಗೆ ಆಗಮಿಸಲಿದ್ದಾರೆ.
ಅಂದು ಸಂಜೆ 3.30ಕ್ಕೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಅವರು, ಸಂಜೆ 4 ಗಂಟೆಗೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆಯಲಿದ್ದಾರೆ.
ಬಳಿಕ ಸಂಜೆ 5 ಗಂಟೆಗೆ ರಥಬೀದಿಯ ಶ್ರೀ ವೆಂಕಟರಮಣ ದೇವಸ್ಥಾನದ ಆವರಣದಲ್ಲಿರುವ ಆಚಾರ್ಯ ಮಠದಲ್ಲಿ ನಡೆಯುತ್ತಿರುವ ಮಂಗಳೂರು ಶಾರದಾ ಮಹೋತ್ಸವದಲ್ಲಿ ಭಾಗವಹಿಸಿ ದೇವರ ದರ್ಶನ ಪಡೆಯಲಿದ್ದಾರೆ. ರಾತ್ರಿ 8 ಗಂಟೆಗೆ ಬೆಂಗಳೂರಿಗೆ ಹಿಂದಿರುಗಲಿದ್ದಾರೆ ಎಂದು ಕೆಪಿಸಿಸಿ ಪ್ರಕಟಣೆ ತಿಳಿಸಿದೆ
- Advertisement -


