- Advertisement -
- Advertisement -
ಉಳ್ಳಾಲ: ಮೆಲ್ಕಾರ್ ಮುಡಿಪು ಸಂಪರ್ಕ ರಸ್ತೆಯ ಬೋಳಿಯಾರ್ ಪೆಟ್ರೋಲ್ ಪಂಪ್ ಬಳಿ ಪಿಕಪ್ ವಾಹನ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಮೃತಪಟ್ಟಿದ್ದಾರೆ. ಸೋಮವಾರ (ಅ.23) ಈ ಅಪಘಾತ ಸಂಭವಿಸಿದೆ.
ಮೃತರನ್ನು ಮಂಜನಾಡಿ ಗ್ರಾಮದ ಮಹಮ್ಮದ್ ಅರ್ಫಾನ್ (22) ಮತ್ತು ಜುನೈದ್ (23) ಎಂದು ಗುರುತಿಸಲಾಗಿದೆ.
ಅತಿವೇಗವಾಗಿ ಬಂದ ಪಿಕಪ್ ವಾಹನ ಬೈಕ್ಗೆ ಡಿಕ್ಕಿ ಹೊಡೆದಿದ್ದು, ಬೈಕ್ ವಿದ್ಯುತ್ ಕಂಬಕ್ಕೆ ಅಪ್ಪಳಿಸಿದೆ. ಡಿಕ್ಕಿಯ ರಭಸಕ್ಕೆ ವಿದ್ಯುತ್ ಕಂಬ ಮುರಿದು ಬಿದ್ದಿದೆ. ಅಪಘಾತದ ದೃಶ್ಯ ಪೆಟ್ರೋಲ್ ಪಂಪ್ನ ಸಿಸಿಟಿವಿಯಲ್ಲಿ ದಾಖಲಾಗಿದೆ.
ಮಂಗಳೂರು ದಕ್ಷಿಣ ಸಂಚಾರಿ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತದೇಹಗಳನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ.
- Advertisement -


