Monday, October 19, 2026
Homeಕರಾವಳಿಅ.25ರಂದು ‘ಮಿ. ದಕ್ಷಿಣ ಕನ್ನಡ–2026’ ಜಿಲ್ಲಾ ಮಟ್ಟದ ದೇಹದಾರ್ಢ್ಯ ಸ್ಪರ್ಧೆ

ಅ.25ರಂದು ‘ಮಿ. ದಕ್ಷಿಣ ಕನ್ನಡ–2026’ ಜಿಲ್ಲಾ ಮಟ್ಟದ ದೇಹದಾರ್ಢ್ಯ ಸ್ಪರ್ಧೆ

- Advertisement -
- Advertisement -

ಮಂಗಳೂರು: ಕಡಬ ತಾಲೂಕಿನ ಆಲಂಕಾರು ಗ್ರಾಮದ ಐರನ್ ಟೆಂಪಲ್ ಸೇವಾ ಟ್ರಸ್ಟ್ ವತಿಯಿಂದ ‘ಮಿ. ದಕ್ಷಿಣ ಕನ್ನಡ–2026’ ಜಿಲ್ಲಾ ಮಟ್ಟದ ದೇಹದಾರ್ಢ್ಯ ಸ್ಪರ್ಧೆ ಅಕ್ಟೋಬರ್ 25ರಂದು ಮಧ್ಯಾಹ್ನ 2.30ಕ್ಕೆ ಆಲಂಕಾರಿನ ದೀನದಯಾಳು ರೈತ ಸೇವಾ ಭವನದಲ್ಲಿ ನಡೆಯಲಿದೆ ಎಂದು ಟ್ರಸ್ಟ್ ಅಧ್ಯಕ್ಷ ಜನಾರ್ದನ ಗೌಡ ಕಯ್ಯಪೆ ತಿಳಿಸಿದ್ದಾರೆ.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ವಿವಿಧ ಜಿಮ್‌ಗಳು ಮತ್ತು ವ್ಯಾಯಾಮ ಶಾಲೆಗಳಿಂದ 250ಕ್ಕೂ ಅಧಿಕ ಸ್ಪರ್ಧಿಗಳು ಭಾಗವಹಿಸುವ ನಿರೀಕ್ಷೆಯಿದೆ ಎಂದರು.

ಜೂನಿಯರ್ ಬಾಡಿ ಬಿಲ್ಡಿಂಗ್ (21 ವರ್ಷಕ್ಕಿಂತ ಕೆಳಗಿನವರು), ಮೆನ್ಸ್ ಫಿಸಿಕ್, ಸೀನಿಯರ್ ಬಾಡಿ ಬಿಲ್ಡಿಂಗ್, ಮಾಸ್ಟರ್ಸ್ (40 ವರ್ಷ ಮೇಲ್ಪಟ್ಟವರು) ಸೇರಿದಂತೆ ವಿವಿಧ ತೂಕದ ವಿಭಾಗಗಳಲ್ಲಿ ಸ್ಪರ್ಧೆಗಳು ನಡೆಯಲಿವೆ. ವಿಜೇತರಿಗೆ 3 ಲಕ್ಷ ರೂ.ಗೂ ಅಧಿಕ ನಗದು ಬಹುಮಾನ ಹಾಗೂ ಟ್ರೋಫಿ ನೀಡಲಾಗುವುದು ಎಂದು ತಿಳಿಸಿದರು.

ಸಂಜೆ 6.30ಕ್ಕೆ ನಡೆಯುವ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಕೃಷ್ಣ ಶೆಟ್ಟಿ ಕಡಬ ವಹಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್, ಸಂಸದ ಬ್ರಿಜೇಶ್ ಚೌಟ, ಶಾಸಕರಾದ ಭಾಗೀರಥಿ ಮುರುಳ್ಯ, ಅಶೋಕ್ ಕುಮಾರ್ ರೈ, ಹರೀಶ್ ಪೂಂಜಾ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ರಾಜೇಶ್ ಆಳ್ವ, ಶಶಿಕಾಂತ್ ಉಳ್ಳಾಲ, ಹರ್ಷಿತ್ ಮತ್ತು ಅಕ್ಷಯ್ ಉಪಸ್ಥಿತರಿದ್ದರು.

- Advertisement -

Latest News

error: Content is protected !!