- Advertisement -
- Advertisement -
ಬೆಳ್ತಂಗಡಿ: ಮೈಸೂರು ದಸರಾ ವೀಕ್ಷಿಸಿ ಬೆಂಗಳೂರಿಗೆ ವಾಪಸಾಗುತ್ತಿದ್ದ ವೇಳೆ ಬೈಕ್ಗೆ ಸ್ಕೂಟಿ ಢಿಕ್ಕಿ ಹೊಡೆದು ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಕೊಳಂಬೆ ನಿವಾಸಿ ಮನೋಹರ (23) ಮೃತಪಟ್ಟಿದ್ದಾರೆ.
ಶಾಂತಪ್ಪ ಗೌಡ ಅವರ ಪುತ್ರ ಮನೋಹರ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಉದ್ಯೋಗದಲ್ಲಿದ್ದರು. ಸ್ನೇಹಿತ ದೀಕ್ಷಿತ್ ಅವರೊಂದಿಗೆ ಬೈಕ್ನಲ್ಲಿ ಮೈಸೂರು ದಸರಾ ವೀಕ್ಷಿಸಲು ತೆರಳಿದ್ದರು. ವಾಪಸಾಗುತ್ತಿದ್ದಾಗ ಸಿದ್ದಾರ್ಥನಗರ ಪೊಲೀಸ್ ಠಾಣಾ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 275ರ ಟ್ರಾಫಿಕ್ ಸಿಗ್ನಲ್ ಬಳಿ ಬೈಕ್ಗೆ ಸ್ಕೂಟಿ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಅಪಘಾತದ ತೀವ್ರತೆಗೆ ರಸ್ತೆಗೆ ಎಸೆಯಲ್ಪಟ್ಟ ಮನೋಹರ ಗಂಭೀರ ಗಾಯಗೊಂಡು ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಿಂಬದಿ ಸವಾರ ದೀಕ್ಷಿತ್ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಕುರಿತು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -


