Tuesday, October 20, 2026
Homeಪ್ರಮುಖ-ಸುದ್ದಿಅಪಾರ್ಟ್‌ಮೆಂಟ್‌ನಲ್ಲಿ ಅಗ್ನಿ ಅವಘಡ; 9 ಮಂದಿಗೆ ಗಾಯ 

ಅಪಾರ್ಟ್‌ಮೆಂಟ್‌ನಲ್ಲಿ ಅಗ್ನಿ ಅವಘಡ; 9 ಮಂದಿಗೆ ಗಾಯ 

- Advertisement -
- Advertisement -

ಮುಂಬೈನ ಕುರ್ಲಾ ಪಶ್ಚಿಮದಲ್ಲಿರುವ 13 ಅಂತಸ್ತಿನ ಅಪಾರ್ಟ್‌ಮೆಂಟ್‌ನಲ್ಲಿ ಮಂಗಳವಾರ ಬೆಳಗ್ಗೆ ಬೆಂಕಿ ಕಾಣಿಸಿಕೊಂಡಿದ್ದು, ಮೂವರು ಮಕ್ಕಳು ಸೇರಿದಂತೆ ಒಟ್ಟು 9 ಮಂದಿ ಗಾಯಗೊಂಡಿದ್ದಾರೆ. ವಿದ್ಯುತ್ ವೈರಿಂಗ್ ಮೂಲಕ ಬೆಂಕಿ ಹರಡಿ ಕಟ್ಟಡದಲ್ಲಿ ದಟ್ಟ ಹೊಗೆ ಆವರಿಸಿದ್ದರಿಂದ ಎಂಟು ಮಂದಿಗೆ ಉಸಿರಾಟದ ತೊಂದರೆ ಉಂಟಾಗಿದೆ. ಮತ್ತೊಬ್ಬರಿಗೆ ಕಾಲಿಗೆ ಗಂಭೀರ ಗಾಯಗಳಾಗಿವೆ.

ಬೆಳಗ್ಗೆ 6.53ರ ಸುಮಾರಿಗೆ ಕೊಹಿನೂರ್ ಎಚ್‌ಡಿಐಎಲ್ ಕಟ್ಟಡ ಸಂಖ್ಯೆ 5ರಲ್ಲಿ ಈ ಘಟನೆ ನಡೆದಿದೆ. ಗಾಯಾಳುಗಳಲ್ಲಿ ಐದು ವರ್ಷದ ಬಾಲಕ, ಇಬ್ಬರು ಹದಿಹರೆಯದ ಬಾಲಕಿಯರು ಹಾಗೂ ಹಿರಿಯ ನಾಗರಿಕರು ಸೇರಿದ್ದಾರೆ. ಎಲ್ಲರನ್ನೂ ಘಾಟ್‌ಕೋಪರ್‌ನ ರಾಜವಾಡಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸದ್ಯ ಎಲ್ಲರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳ, ಪೊಲೀಸರು ಮತ್ತು ಆಂಬ್ಯುಲೆನ್ಸ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದರು. ತ್ವರಿತ ಕಾರ್ಯಾಚರಣೆ ನಡೆಸಿದ ಅಗ್ನಿಶಾಮಕ ಸಿಬ್ಬಂದಿ ಬೆಳಗ್ಗೆ 7.21ರ ವೇಳೆಗೆ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಿದರು.

ಪ್ರಾಥಮಿಕ ತನಿಖೆಯ ಪ್ರಕಾರ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಆದರೆ, ನಿಖರ ಕಾರಣ ತಿಳಿಯಲು ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!