Wednesday, October 21, 2026
Homeಅಪರಾಧಜೂಜಾಟದಲ್ಲಿ ತೊಡಗಿದ್ದ ಐವರ ಬಂಧನ; ಜೂಜಾಟಕ್ಕೆ ಬಳಸಲಾಗಿದ್ದ ₹18,150 ನಗದು ವಶಕ್ಕೆ

ಜೂಜಾಟದಲ್ಲಿ ತೊಡಗಿದ್ದ ಐವರ ಬಂಧನ; ಜೂಜಾಟಕ್ಕೆ ಬಳಸಲಾಗಿದ್ದ ₹18,150 ನಗದು ವಶಕ್ಕೆ

- Advertisement -
- Advertisement -

ಸವಣೂರು: ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ಸವಣೂರು ಕುವತ್ತೋಡಿ ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ಹಣವನ್ನು ಪಣವಾಗಿಟ್ಟು ಉಲಾಯಿ-ಪಿದಾಯಿ ಜೂಜಾಟ ಆಡುತ್ತಿದ್ದವರ ವಿರುದ್ಧ ಪೊಲೀಸರು ದಾಳಿ ನಡೆಸಿದ್ದಾರೆ.

ಜೂಜಾಟ ನಡೆಯುತ್ತಿರುವ ಬಗ್ಗೆ ಮಾಹಿತಿ ಪಡೆದ ಬೆಳ್ಳಾರೆ ಪೊಲೀಸ್ ಠಾಣೆಯ ಉಪನಿರೀಕ್ಷಕ ಈರಯ್ಯ ಡಿ.ಎನ್. ಅವರು ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ದಾಳಿ ನಡೆಸಿದ್ದಾರೆ. ಈ ವೇಳೆ ಜೂಜಾಟದಲ್ಲಿ ತೊಡಗಿದ್ದ ಗುರವ, ಇಸೂಬು, ಕುಶಾಲಪ್ಪ, ತಾಜುದ್ದೀನ್ ಹಾಗೂ ರಾಮಣ್ಣ ಎಂಬ ಐವರನ್ನು ವಶಕ್ಕೆ ಪಡೆಯಲಾಗಿದೆ. ಜೂಜಾಟಕ್ಕೆ ಬಳಸಲಾಗಿದ್ದ ₹18,150 ನಗದು, ಇಸ್ಪೀಟು ಎಲೆಗಳು ಸೇರಿದಂತೆ ಇತರ ಸೊತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಈ ಸಂಬಂಧ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಅ.ಕ್ರ. 60/2026ರಂತೆ ಕರ್ನಾಟಕ ಪೊಲೀಸ್ ಕಾಯ್ದೆಯ ಕಲಂ 87ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ಮುಂದುವರಿದಿದೆ.

- Advertisement -

Latest News

error: Content is protected !!