- Advertisement -
- Advertisement -
ಬೆಂಗಳೂರು: ಆಯುಧ ಪೂಜೆ ಮತ್ತು ವಿಜಯದಶಮಿ ಹಬ್ಬದ ಹಿನ್ನೆಲೆಯಲ್ಲಿ ಬೆಂಗಳೂರಿನ ಲೋಕಭವನದಲ್ಲಿ ಆಯುಧ ಪೂಜೆ ಕಾರ್ಯಕ್ರಮ ನಡೆಯಿತು.ಲೋಕಭವನದ ಅವರಣದಲ್ಲಿ ವಾಹನಗಳಿಗೆ ಪೂಜೆ ಸಲ್ಲಿಸಿದ ರಾಜ್ಯಪಾಲೆ ಡಾ. ಸುಧಾ ಯಾದವ್, ಲೋಕ ಭವನದ ಪೊಲೀಸ್ ಗಾರ್ಡ್ ಭದ್ರತಾ ಸಿಬ್ಬಂದಿಯ ಶಸ್ತ್ರಾಸ್ತ್ರಗಳ ಪೂಜೆಯನ್ನೂ ನೆರವೇರಿಸಿದರು.
ಈ ಸಂಧರ್ಭದಲ್ಲಿ ಲೋಕಭವನದ ಅಧಿಕಾರಿಗಳು ಮತ್ತು ಸಿಬ್ಬಂದಿ ರಾಜ್ಯಪಾಲರಿಗೆ ದಸರಾ ಹಬ್ಬದ ಶುಭಾಶಯ ಕೋರಿದರು.
ಹಬ್ಬದ ಹಿನ್ನೆಲೆಯಲ್ಲಿ ಲೋಕಭವನದಲ್ಲಿ ರಂಗೋಲಿ ಮತ್ತು ತೋರಣಗಳಿಂದ ಅಲಂಕರಿಸಲಾಗಿತ್ತು. ಮಹಿಳಾ ಸಿಬ್ಬಂದಿ ಜೊತೆಗೂಡಿ ರಾಜ್ಯಪಾಲರು ಪೂಜೆ ಸಲ್ಲಿಸಿದ್ದು ಗಮನ ಸೆಳೆಯಿತು.
- Advertisement -


