Friday, October 23, 2026
Homeಕರಾವಳಿಉಡುಪಿಬಸ್ ಚಾಲಕನಿಗೆ ದಿಢೀರ್ ಅನಾರೋಗ್ಯ; ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ದುರಂತ‌

ಬಸ್ ಚಾಲಕನಿಗೆ ದಿಢೀರ್ ಅನಾರೋಗ್ಯ; ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ದುರಂತ‌

- Advertisement -
- Advertisement -

ಕಾಪು: ಚಾಲಕನಿಗೆ ದಿಢೀರ್ ಅನಾರೋಗ್ಯ ಕಾಣಿಸಿಕೊಂಡರೂ ಸಮಯಪ್ರಜ್ಞೆ ಮೆರೆದು ಬಸ್ಸನ್ನು ರಸ್ತೆಬದಿಗೆ ತಿರುಗಿಸಿದ ಪರಿಣಾಮ ಭಾರಿ ಅಪಘಾತವೊಂದು ತಪ್ಪಿದ ಘಟನೆ ಮುಳೂರಿನಲ್ಲಿ ನಡೆದಿದೆ.

ಮಂಗಳೂರಿನಿಂದ ಉಡುಪಿ ಕಡೆಗೆ ತೆರಳುತ್ತಿದ್ದ ವಿಜಯಲಕ್ಷ್ಮಿ ಎಕ್ಸ್‌ಪ್ರೆಸ್ ಬಸ್ ಮುಳೂರು ತಲುಪಿದಾಗ ಚಾಲಕನಿಗೆ ದಿಢೀರ್ ಅಸ್ವಸ್ಥತೆ ಕಾಣಿಸಿಕೊಂಡಿದೆ. ಈ ವೇಳೆ ಬಸ್ ನಿಯಂತ್ರಣ ತಪ್ಪಿ ಎಡಭಾಗಕ್ಕೆ ಚಲಿಸಿದೆ.

ಆದರೂ ತಕ್ಷಣ ಎಚ್ಚೆತ್ತುಕೊಂಡ ಚಾಲಕ ಬಸ್ಸನ್ನು ರಸ್ತೆಬದಿಗೆ ತಿರುಗಿಸಿದ್ದಾರೆ. ಈ ವೇಳೆ ಬಸ್ ಮೊದಲು ಸಣ್ಣ ಮರಕ್ಕೆ ಢಿಕ್ಕಿ ಹೊಡೆದು, ಬಳಿಕ ದೊಡ್ಡ ಮರಕ್ಕೆ ಅಪ್ಪಳಿಸಿ ನಿಂತಿದೆ. ಇದರಿಂದ ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತ ತಪ್ಪಿದಂತಾಗಿದೆ. ಬಸ್ ಹತ್ತಿರದಲ್ಲಿದ್ದ ಎರಡು ವಿದ್ಯುತ್ ಕಂಬಗಳಿಗೆ ಢಿಕ್ಕಿ ಹೊಡೆಯುವ ಸಾಧ್ಯತೆಯೂ ಇತ್ತು. ಆದರೆ ಚಾಲಕನ ಸಮಯಪ್ರಜ್ಞೆಯಿಂದ ಪ್ರಯಾಣಿಕರಿಗೆ ಎದುರಾಗಬಹುದಾಗಿದ್ದ ಗಂಭೀರ ಅಪಾಯ ತಪ್ಪಿದೆ. ಘಟನೆಯಲ್ಲಿ ಕೆಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

- Advertisement -

Latest News

error: Content is protected !!