Friday, October 23, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಸೌಜನ್ಯ ಪ್ರಕರಣದ ಎಸ್ಐಟಿ ಟೀಂ ನ್ಯಾಯಾಲಯಕ್ಕೆ ಆಗಮನ: ಸೌಜನ್ಯ ತಾಯಿ ಕುಸುಮಾವತಿ ಕೂಡ...

ಬೆಳ್ತಂಗಡಿ : ಸೌಜನ್ಯ ಪ್ರಕರಣದ ಎಸ್ಐಟಿ ಟೀಂ ನ್ಯಾಯಾಲಯಕ್ಕೆ ಆಗಮನ: ಸೌಜನ್ಯ ತಾಯಿ ಕುಸುಮಾವತಿ ಕೂಡ ಹಾಜರು

- Advertisement -
- Advertisement -

ಬೆಳ್ತಂಗಡಿ : ಕಾಲೇಜ್ ವಿದ್ಯಾರ್ಥಿನಿ ಧರ್ಮಸ್ಥಳ ಗ್ರಾಮದ ಪಾಂಗಳ ನಿವಾಸಿ ಕು.ಸೌಜನ್ಯ ಕೊಲೆ ಪ್ರಕರಣದ ಸಂಬಂಧ ಸುಪ್ರೀಂ ಕೋರ್ಟ್ ಮರುತನಿಖೆ ಆದೇಶದಂತೆ ಎಸ್ಐಟಿ ತಂಡ ತನಿಖೆ ನಡೆಸುತ್ತಿದ್ದು. ಇದೀಗ ತನಿಖೆಯನ್ನು ಎಸ್ಐಟಿ ಅಧಿಕಾರಿಗಳು ಚುರುಕುಗೊಳಿಸಿ ಬೆಳ್ತಂಗಡಿಗೆ ಆಗಮಿಸಿದ್ದಾರೆ.

ಮಂಗಳೂರು ಎಸ್ಐಟಿ ಕಚೇರಿಯಿಂದ ಸೌಜನ್ಯ ಪ್ರಕರಣದ ತನಿಖಾಧಿಕಾರಿ ಲೋಕೇಶ್.ಪಿ.ಜಗಲಾಸರ್ ಐಪಿಎಸ್ ಮತ್ತು ಎಸಿಪಿ ಮನೋಜ್ ಕುಮಾರ್ ನಾಯಕ್ ನೇತೃತ್ವದ ತಂಡ ಅ.23 ರಂದು ಸಂಜೆ 4:30 ಕ್ಕೆ ಪ್ರಿಂಟರ್, ಲ್ಯಾಪ್ ಟಾಪ್ ಸಮೇತ ಬೆಳ್ತಂಗಡಿ ಜೆ.ಎಮ್.ಎಫ್.ಸಿ ನ್ಯಾಯಾಲಯಕ್ಕೆ ಆಗಮಿಸಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆಯಾದ ಸೌಜನ್ಯ ತಾಯಿ ಕುಸುಮಾವತಿ ರವರನ್ನು ಕರೆದುಕೊಂಡು ಬಂದು ಇಬ್ಬರು ಸರಕಾರಿ ಪಂಚರ ಸಮಕ್ಷಮದಲ್ಲಿ ರಕ್ತದ ಮಾದರಿಯನ್ನು (ಡಿಎನ್ಎ) ನ್ಯಾಯಾಧೀಶರಾದ ಶಶಾಂಕ್ ನಾಗೇಂದ್ರ ಭಟ್ ಮುಂದೆ ಸಂಗ್ರಹಿಸಿದ್ದಾರೆ.

ಬೆಳ್ತಂಗಡಿ ಜೆ.ಎಮ್.ಎಫ್.ಸಿ ನ್ಯಾಯಾಲಯದಲ್ಲಿ ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಯ ವೈದ್ಯರಾದ ಅಶಾಲತಾ ನೇತೃತ್ವದಲ್ಲಿ ಕುಸುಮಾವತಿ ಅವರ ರಕ್ತದ ಮಾದರಿಯನ್ನು (ಡಿಎನ್ಎ) ಸಂಗ್ರಹಿಸಿ ಬಳಿಕ ಎಸ್ಐಟಿ ಆಧಿಕಾರಿಗಳು ಎಫ್ಎಸ್ಎಲ್ ಗೆ ಕಳುಹಿಸಿ ಡಿಎನ್ಎ ವರದಿಯನ್ನು ಪಡೆಯಲಿದ್ದಾರೆ ಎಂದು ಎಸ್ಐಟಿ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.JMFC ನ್ಯಾಯಾಲಯದ ಬಾಗಿಲು ಮುಚ್ಚಿ ಪ್ರಕ್ರಿಯೆ ನಡೆಸಲಾಗುತ್ತಿದೆ.

- Advertisement -

Latest News

error: Content is protected !!