- Advertisement -
- Advertisement -
ಬೆಂಗಳೂರು: ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಹಾಗೂ ನಟ ಧನ್ವೀರ್ ಗೌಡ ನಡುವಿನ ವಿವಾದ ಈಗ ಪೊಲೀಸ್ ಠಾಣೆ ಮೆಟ್ಟಿಲೇರಿದೆ.
ವಿಜಯಲಕ್ಷ್ಮಿ ಅವರ ಮ್ಯಾನೇಜರ್ ನಾಗರಾಜ್ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದ ಮೇಲೆ ನಟ ಧನ್ವೀರ್ ಗೌಡ ವಿರುದ್ಧ ರಾಜರಾಜೇಶ್ವರಿನಗರ ಪೊಲೀಸ್ ಠಾಣೆಯಲ್ಲಿ ಎನ್ಸಿಆರ್ (NCR) ದಾಖಲಾಗಿದೆ.
ಈ ಬೆಳವಣಿಗೆ ಕುರಿತು ಪ್ರತಿಕ್ರಿಯಿಸಿರುವ ಧನ್ವೀರ್, “ಮ್ಯಾನೇಜರ್ಗೆ ಬೈಯಲು ಬಲವಾದ ಕಾರಣವಿದೆ. ಯಾರ ಮುಖವಾಡ ಹೇಗಿದೆ ಮತ್ತು ಅವರ ಬಂಡವಾಳ ಏನು ಎಂಬುದು ಶೀಘ್ರದಲ್ಲೇ ಹೊರಬರಲಿದೆ. ಮುಖವಾಡ ಕಳಚಲು ನಾವು ಶತಸಿದ್ಧರಿದ್ದು, ಶೀಘ್ರದಲ್ಲೇ ಸುದ್ದಿಗೋಷ್ಠಿ ನಡೆಸಿ ಸತ್ಯಾಂಶ ಬಯಲು ಮಾಡ್ತೀನಿ” ಎಂದು ಎಚ್ಚರಿಕೆ ನೀಡಿದ್ದಾರೆ.
- Advertisement -


