Monday, October 26, 2026
Homeಕರಾವಳಿಆಟವಾಡುತ್ತಿದ್ದಾಗ ಕುತ್ತಿಗೆಗೆ ಹಗ್ಗ ಸಿಲುಕಿ 9 ವರ್ಷದ ಬಾಲಕ ಸಾವು 

ಆಟವಾಡುತ್ತಿದ್ದಾಗ ಕುತ್ತಿಗೆಗೆ ಹಗ್ಗ ಸಿಲುಕಿ 9 ವರ್ಷದ ಬಾಲಕ ಸಾವು 

- Advertisement -
- Advertisement -

ಪುಂಜಾಲಕಟ್ಟೆ: ಮನೆಯ ಹಾಲ್‌ನಲ್ಲಿ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಕುತ್ತಿಗೆಗೆ ಹಗ್ಗ ಸಿಲುಕಿ ಉಸಿರುಗಟ್ಟಿ 9 ವರ್ಷದ ಬಾಲಕ ಮೃತಪಟ್ಟ ದಾರುಣ ಘಟನೆ ಕುಕ್ಕಿಪಾಡಿ ಗ್ರಾಮದ ಮಾವಿನಕಟ್ಟೆ ಸಮೀಪದ ಕೆಂತಲೆ ಎಂಬಲ್ಲಿ ಅ.25ರ ರಾತ್ರಿ ನಡೆದಿದೆ.

ಕೆಂತಲೆ ನಿವಾಸಿ ಆನಂದ ಪೂಜಾರಿ ಅವರ ಪುತ್ರ ಅಮೃತ್ ಎ. ಪೂಜಾರಿ (9) ಮೃತಪಟ್ಟ ಬಾಲಕ.

ಅ.25ರ ರಾತ್ರಿ ಮನೆಯ ಎದುರಿನ ಹಾಲ್‌ನಲ್ಲಿ ಅಮೃತ್ ಒಬ್ಬನೇ ಆಟವಾಡುತ್ತಿದ್ದನು. ಈ ವೇಳೆ ಕಿಟಕಿಗೆ ಕಟ್ಟಲಾಗಿದ್ದ ಹಗ್ಗ ಆಕಸ್ಮಿಕವಾಗಿ ಆತನ ಕುತ್ತಿಗೆಗೆ ಸಿಲುಕಿಕೊಂಡಿದೆ. ಬಾಲಕ ಹಗ್ಗದಲ್ಲಿ ಸಿಲುಕಿ ಮಾತನಾಡದಿರುವುದನ್ನು ಗಮನಿಸಿದ ಸಹೋದರಿ ಪ್ರಾರ್ಥನಾ, ತಕ್ಷಣ ಚಿಕ್ಕಪ್ಪನ ಮನೆಗೆ ತೆರಳಿ ವಿಷಯ ತಿಳಿಸಿದ್ದಾಳೆ.

ಕುಟುಂಬಸ್ಥರು ಸ್ಥಳಕ್ಕೆ ಬಂದು ನೋಡಿದಾಗ, ತಾಯಿ ಗೀತಾ ಅವರು ಮಗನನ್ನು ತೊಡೆಯ ಮೇಲೆ ಮಲಗಿಸಿಕೊಂಡು ಅಳುತ್ತಿದ್ದರು. ಕೂಡಲೇ ಬಾಲಕನನ್ನು ಮೂಡುಬಿದಿರೆಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

- Advertisement -

Latest News

error: Content is protected !!