Tuesday, October 27, 2026
Homeಕರಾವಳಿಉಡುಪಿಬ್ರಹ್ಮಾವರದಲ್ಲಿ SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪ್ರತಿಕೃತಿ ದಹನ, ಅಣಕು...

ಬ್ರಹ್ಮಾವರದಲ್ಲಿ SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪ್ರತಿಕೃತಿ ದಹನ, ಅಣಕು ಶವಯಾತ್ರೆ

- Advertisement -
- Advertisement -

ಉಡುಪಿ: SIR ಪ್ರಕ್ರಿಯೆ ವಿರೋಧಿಸಿ ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಬ್ರಹ್ಮಾವರದಲ್ಲಿ ಪ್ರತಿಭಟನೆ ನಡೆಸಲಾಯಿತು. ಬಂಟರ ಭವನದಿಂದ ಬ್ರಹ್ಮಾವರ ಬಸ್ ನಿಲ್ದಾಣದವರೆಗೆ ಪಾದಯಾತ್ರೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಅಣಕು ಶವಯಾತ್ರೆ ನಡೆಸಿ, ಪ್ರತಿಕೃತಿ ದಹನ ಮಾಡಿದರು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್, SIR ಪ್ರಕ್ರಿಯೆಯ ಮೂಲಕ ಬಡವರು, ಕಾರ್ಮಿಕರು ಹಾಗೂ ಮಧ್ಯಮ ವರ್ಗದ ಜನರ ಮತದಾನದ ಹಕ್ಕನ್ನು ಕಸಿದುಕೊಳ್ಳುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದರು.

ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು 15 ಸಾವಿರ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ ಎಂದು ದೂರಿದ ಅವರು, ಈ ಬೆಳವಣಿಗೆಯ ಹೊಣೆ ಹೊತ್ತು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

- Advertisement -

Latest News

error: Content is protected !!