Tuesday, October 27, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಸೌಜನ್ಯ ಕೇಸ್ ಮರು ತನಿಖೆ ಪ್ರಕರಣದಲ್ಲಿ 2012ರಿಂದ ತನಿಖೆ ನಡೆಸಿದ್ದ 15ಕ್ಕೂ ಅಧಿಕ...

ಬೆಳ್ತಂಗಡಿ : ಸೌಜನ್ಯ ಕೇಸ್ ಮರು ತನಿಖೆ ಪ್ರಕರಣದಲ್ಲಿ 2012ರಿಂದ ತನಿಖೆ ನಡೆಸಿದ್ದ 15ಕ್ಕೂ ಅಧಿಕ ಪೊಲೀಸರಿಗೆ ಎಸ್ಐಟಿ ನೋಟಿಸ್ ಜಾರಿ

- Advertisement -
- Advertisement -

ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದ ಪಾಂಗಳ ನಿವಾಸಿ ಕು.ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಲಾಗಿದೆ. ಪ್ರಕರಣದ ಹಿಂದಿನ ತನಿಖೆ ನಡೆಸಿದ್ದ ಡಾಕ್ಟರ್, ಬೆಳ್ತಂಗಡಿ ಪೊಲೀಸ್, ಸಿಐಡಿ, ಸಿಬಿಐಗೆ ಸಂಬಂಧಿಸಿದ ಅಧಿಕಾರಿ ಮತ್ತು ಸಿಬ್ಬಂದಿಗೆ ವಿಶೇಷ ತನಿಖಾ ತಂಡ(SIT) ಅ.23 ರಂದು ನೋಟಿಸ್ ಜಾರಿಗೊಳಿಸಲಾಗಿದೆ.

ಈವರೆಗೆ ಸುಮಾರು 15ಕ್ಕೂ ಹೆಚ್ಚು ಅಧಿಕಾರಿ ಮತ್ತು ಸಿಬ್ಬಂದಿಗೆ ನೋಟಿಸ್ ನೀಡಲಾಗಿದೆ ಎಂದು ತಿಳಿದುಬಂದಿದೆ. 2012ರಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಆರಂಭಗೊಂಡಿದ್ದ ತನಿಖೆಯಿಂದ ಹಿಡಿದು, ಬಳಿಕ ಸಿಐಡಿ ಮತ್ತು ಸಿಬಿಐ ನಡೆಸಿದ ತನಿಖೆಗಳವರೆಗೆ ಪ್ರಕರಣದೊಂದಿಗೆ ಸಂಬಂಧ ಹೊಂದಿದ್ದ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ವಿಚಾರಣೆ ನಡೆಸಿ ಹೇಳಿಕೆ ಪಡೆಯಲು ಎಸ್ಐಟಿ ಮುಂದಾಗಿದೆ.

- Advertisement -

Latest News

error: Content is protected !!