Tuesday, October 27, 2026
Homeಕರಾವಳಿಮಂಗಳೂರುಮಂಗಳೂರು; ಬೀಚ್‌ನಲ್ಲಿ ಪ್ರೇಮಿಗಳ ಜೋಡಿಗೆ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಯುವಕ ಆತ್ಮಹತ್ಯೆಗೆ ಶರಣು

ಮಂಗಳೂರು; ಬೀಚ್‌ನಲ್ಲಿ ಪ್ರೇಮಿಗಳ ಜೋಡಿಗೆ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಯುವಕ ಆತ್ಮಹತ್ಯೆಗೆ ಶರಣು

- Advertisement -
- Advertisement -

ಮಂಗಳೂರು: ಬೀಚ್‌ನಲ್ಲಿ ಪ್ರೇಮಿಗಳ ಜೋಡಿಗೆ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಯುವಕನೋರ್ವ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ತನ್ನ ನಿವಾಸದಲ್ಲಿ ಮಂಗಳವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಅಕ್ಟೋಬರ್ 25ರಂದು ಬೀಚ್‌ನಲ್ಲಿ ಜೋಡಿಯೊಂದಕ್ಕೆ ಕಿರುಕುಳ ನೀಡಿದ ಆರೋಪದಡಿ ಈ ಯುವಕ ಸೇರಿದಂತೆ ಹಲವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದರು. ಮಂಗಳವಾರ ಬೆಳಿಗ್ಗೆ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಯುವಕನನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಪರೀಕ್ಷಿಸಿದ ವೈದ್ಯರು ಆತ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಘಟನಾ ಸ್ಥಳದಲ್ಲಿ ಡೆತ್‌ನೋಟ್ ಪತ್ತೆಯಾಗಿದ್ದು, “ತನ್ನ ಸಾವಿಗೆ ಯಾರೂ ಕಾರಣರಲ್ಲ” ಎಂದು ಬರೆಯಲಾಗಿದೆ ಎಂದು ತಿಳಿದುಬಂದಿದೆ. ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

- Advertisement -

Latest News

error: Content is protected !!