Thursday, October 29, 2026
Homeಕರಾವಳಿತೋಡಾರ್‌ನಲ್ಲಿ ಹೆದ್ದಾರಿ ಕಾಮಗಾರಿಗೆ ಬಳಸುತ್ತಿದ್ದ ಮ್ಯಾಟ್‌ಗೆ ಬೆಂಕಿ

ತೋಡಾರ್‌ನಲ್ಲಿ ಹೆದ್ದಾರಿ ಕಾಮಗಾರಿಗೆ ಬಳಸುತ್ತಿದ್ದ ಮ್ಯಾಟ್‌ಗೆ ಬೆಂಕಿ

- Advertisement -
- Advertisement -

ಮೂಡುಬಿದಿರೆ: ಇಲ್ಲಿನ ತೋಡಾರ್‌ನಲ್ಲಿ ಅಕ್ಟೋಬರ್ 27ರಂದು ಹೆದ್ದಾರಿ ನಿರ್ಮಾಣ ಕಾಮಗಾರಿಗೆ ಬಳಸುತ್ತಿದ್ದ ಮ್ಯಾಟ್‌ಗೆ ಬೆಂಕಿ ಹೊತ್ತಿಕೊಂಡ ಘಟನೆ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಮಂಗಳೂರು-ಬಿಕರ್ನಕಟ್ಟೆ-ಸಾವನೂರು ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಯೋಜನೆಯ ಭಾಗವಾಗಿ ಡಿಬಿಎಲ್ ಕನ್‌ಸ್ಟ್ರಕ್ಷನ್ ಕಂಪನಿಯು ಕಾಮಗಾರಿ ನಡೆಸುತ್ತಿದ್ದ ಸ್ಥಳದಲ್ಲಿ ಈ ಘಟನೆ ಸಂಭವಿಸಿದೆ. ಅಲ್ಲಿದ್ದ ಮ್ಯಾಟ್‌ಗೆ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡಿದ್ದು, ಕ್ಷಣಾರ್ಧದಲ್ಲಿ ಬೆಂಕಿ ವ್ಯಾಪಿಸಿದೆ.

ಬೆಂಕಿಯ ತೀವ್ರತೆಗೆ ಮ್ಯಾಟ್ ಸಂಪೂರ್ಣವಾಗಿ ಸುಟ್ಟುಹೋಗಿದ್ದು, ಪ್ರದೇಶದಲ್ಲಿ ದಟ್ಟವಾದ ಕಪ್ಪು ಹೊಗೆ ಆವರಿಸಿತ್ತು. ಇದರಿಂದ ಸ್ಥಳೀಯರು ಹಾಗೂ ವಾಹನ ಸವಾರರಲ್ಲಿ ಕೆಲಕಾಲ ಆತಂಕ ಉಂಟಾಯಿತು.

ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಅಥವಾ ಗಾಯಗಳಾದ ಬಗ್ಗೆ ವರದಿಯಾಗಿಲ್ಲ. ಬೆಂಕಿ ಕಾಣಿಸಿಕೊಳ್ಳಲು ನಿಖರವಾದ ಕಾರಣವೇನು ಮತ್ತು ಎಷ್ಟು ನಷ್ಟ ಸಂಭವಿಸಿದೆ ಎಂಬುದು ಇನ್ನಷ್ಟೇ ತಿಳಿದುಬರಬೇಕಿದೆ.

- Advertisement -

Latest News

error: Content is protected !!