Wednesday, October 28, 2026
Homeಕರಾವಳಿಮಂಗಳೂರುಗುರುವಾಯನಕೆರೆ–ಉಪ್ಪಿನಂಗಡಿ ರಸ್ತೆ ಅಭಿವೃದ್ಧಿಗೆ ಅನುದಾನ ಬಿಡುಗಡೆಗೆ ಆಗ್ರಹ; ಸಿಎಂ ಡಿ ಕೆ ಶಿವಕುಮಾರ್ ಅವರನ್ನು ಭೇಟಿಯಾಗಿ...

ಗುರುವಾಯನಕೆರೆ–ಉಪ್ಪಿನಂಗಡಿ ರಸ್ತೆ ಅಭಿವೃದ್ಧಿಗೆ ಅನುದಾನ ಬಿಡುಗಡೆಗೆ ಆಗ್ರಹ; ಸಿಎಂ ಡಿ ಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಶಾಸಕ ಹರೀಶ್ ಪೂಂಜ; ಸಕಾರಾತ್ಮಕ ಸ್ಪಂದನೆ

- Advertisement -
- Advertisement -

ಬೆಳ್ತಂಗಡಿ, ಅ. 28: ಗುರುವಾಯನಕೆರೆ–ಉಪ್ಪಿನಂಗಡಿ ರಸ್ತೆ ಅಭಿವೃದ್ಧಿಗೆ ಅಗತ್ಯ ಅನುದಾನ ಬಿಡುಗಡೆ ಮಾಡುವಂತೆ ಶಾಸಕ ಹರೀಶ್ ಪೂಂಜ ಅವರು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಖುದ್ದಾಗಿ ಭೇಟಿಯಾಗಿ ಮನವಿ ಸಲ್ಲಿಸಿದ್ದು, ಇದಕ್ಕೆ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುರುವಾಯನಕೆರೆ–ಉಪ್ಪಿನಂಗಡಿ ರಸ್ತೆಯನ್ನು ಪ್ರತಿನಿತ್ಯ ನೂರಾರು ಸಾರ್ವಜನಿಕರು, ವಿದ್ಯಾರ್ಥಿಗಳು, ಉದ್ಯೋಗಿಗಳು ಹಾಗೂ ವ್ಯಾಪಾರಸ್ಥರು ಅವಲಂಬಿಸಿದ್ದಾರೆ. ರಸ್ತೆ ಅಭಿವೃದ್ಧಿಗೆ ಅನುದಾನ ಬಿಡುಗಡೆಯಾಗದ ಕಾರಣ ಕಾಮಗಾರಿ ವಿಳಂಬವಾಗಿದ್ದು, ಹದಗೆಟ್ಟ ರಸ್ತೆಯಿಂದ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ.

ಈ ರಸ್ತೆಯ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡುವಂತೆ ಈ ಹಿಂದೆಯೂ ಸರ್ಕಾರಕ್ಕೆ ಹಲವು ಬಾರಿ ಮನವಿ ಸಲ್ಲಿಸಲಾಗಿತ್ತು. ವಿಧಾನಸಭೆಯಲ್ಲಿಯೂ ಈ ವಿಷಯ ಪ್ರಸ್ತಾಪಿಸಲಾಗಿದ್ದು, ಅನುದಾನ ಬಿಡುಗಡೆ ಮಾಡುವ ಭರವಸೆ ದೊರೆತಿದ್ದರೂ ಇದುವರೆಗೆ ಅನುದಾನ ಮಂಜೂರಾಗಿಲ್ಲ.

ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳನ್ನು ಭೇಟಿಯಾದ ಶಾಸಕ ಹರೀಶ್ ಪೂಂಜ ಅವರು, ರಸ್ತೆಯ ದುಸ್ಥಿತಿ ಹಾಗೂ ಸಾರ್ವಜನಿಕರ ಸಂಚಾರದ ಸಮಸ್ಯೆಗಳನ್ನು ಗಮನಕ್ಕೆ ತಂದು, ಅಭಿವೃದ್ಧಿ ಕಾಮಗಾರಿಗೆ ಅಗತ್ಯ ಅನುದಾನವನ್ನು ಶೀಘ್ರ ಮಂಜೂರು ಮಾಡುವಂತೆ ಒತ್ತಾಯಿಸಿದ್ದಾರೆ.

ಮುಖ್ಯಮಂತ್ರಿಗಳ ಸಕಾರಾತ್ಮಕ ಸ್ಪಂದನೆಯಿಂದ ರಸ್ತೆ ಅಭಿವೃದ್ಧಿಗೆ ಅನುದಾನ ಬಿಡುಗಡೆಯಾಗುವ ನಿರೀಕ್ಷೆ ಮೂಡಿದ್ದು, ಕಾಮಗಾರಿ ಶೀಘ್ರ ಆರಂಭವಾದರೆ ಈ ಭಾಗದ ಜನರ ಬಹುದಿನಗಳ ಬೇಡಿಕೆ ಈಡೇರಿದಂತಾಗಲಿದೆ.

- Advertisement -

Latest News

error: Content is protected !!