Wednesday, October 28, 2026
Homeಕರಾವಳಿಉಡುಪಿಕಾರ್ಕಳದ ವಸತಿ ಶಾಲೆಯಲ್ಲಿ ಕುಸಿದು ಬಿದ್ದು 8ನೇ ತರಗತಿ ವಿದ್ಯಾರ್ಥಿನಿ ಸಾವು

ಕಾರ್ಕಳದ ವಸತಿ ಶಾಲೆಯಲ್ಲಿ ಕುಸಿದು ಬಿದ್ದು 8ನೇ ತರಗತಿ ವಿದ್ಯಾರ್ಥಿನಿ ಸಾವು

- Advertisement -
- Advertisement -

ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮಿಯ್ಯಾರು ಮೊರಾರ್ಜಿ ದೇಸಾಯಿ ವಸತಿ ಶಾಲೆಯ 8ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಕುಸಿದು ಬಿದ್ದು ಮೃತಪಟ್ಟ ಘಟನೆ ಅಕ್ಟೋಬರ್ 28ರ ಬುಧವಾರ ಬೆಳಕಿಗೆ ಬಂದಿದೆ.

ಮೃತ ಬಾಲಕಿಯನ್ನು ಬಾಗಲಕೋಟೆ ಮೂಲದ ಮೇಘನಾ (13) ಎಂದು ಗುರುತಿಸಲಾಗಿದೆ.

ಬುಧವಾರ ಬೆಳಗ್ಗೆ ಸುಮಾರು 6 ಗಂಟೆಯ ವೇಳೆಗೆ ಮೇಘನಾ ಮೂರ್ಛೆ ತಪ್ಪಿ ಕುಸಿದು ಬಿದ್ದಿದ್ದಾಳೆ ಎನ್ನಲಾಗಿದೆ. ಕೂಡಲೇ ಶಾಲಾ ಸಿಬ್ಬಂದಿ ಬಾಲಕಿಯನ್ನು ಕಾರ್ಕಳ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಬಾಲಕಿಯನ್ನು ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದನ್ನು ದೃಢಪಡಿಸಿದ್ದಾರೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮಣಿಪಾಲಕ್ಕೆ ರವಾನಿಸಲಾಗಿದೆ. ಈ ಸಂಬಂಧ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!