
ಬೆಂಗಳೂರು: 87 ಕೆಎಎಸ್ ಅಧಿಕಾರಿಗಳನ್ನು ಆಡಳಿತಾತ್ಮಕ ದೃಷ್ಟಿಯಿಂದ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಉಡುಪಿ ಜಿಲ್ಲೆಯ ಕುಂದಾಪುರ ಎಸಿ ಆಗಿದ್ದ ರಶ್ಮಿ ಎಸ್.ಆರ್. ಅವರನ್ನು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿಯ ಆಡಳಿತ ಮತ್ತು ಮಾನವ ಸಂಪನ್ಮೂಲ ವಿಭಾಗದ ಪ್ರಧಾನ ವ್ಯವಸ್ಥಾಪಕರಾಗಿ ವರ್ಗಾವಣೆ ಮಾಡಲಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಗ್ರೇಡ್ 1 ತಹಸೀಲ್ದಾರ್ ಆಗಿದ್ದ ಮಹೇಂದ್ರ ಮುನ್ನೋಳಿ ಅವರನ್ನು ಮಂಗಳೂರು ಮಹಾನಗರ ಪಾಲಿಕೆಯ ವಲಯ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ.
ಇನ್ನು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಗ್ರೇಡ್ 1 ತಹಸೀಲ್ದಾರ್ ಆಗಿದ್ದ ಮಂಜುಳಾ ಡಿ.ಓ. ಅವರನ್ನು ಮಂಗಳೂರು ಮಹಾನಗರ ಪಾಲಿಕೆಯ ವಲಯ ಆಯುಕ್ತ 2 ಆಗಿ ವರ್ಗಾಯಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿಯಾಗಿದ್ದ ಜಯಲಕ್ಷ್ಮಿ ಅವರನ್ನು ಕೊಡಗು ಅಪರ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಲಾಗಿದೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ವಿಶೇಷ ಭೂಸ್ವಾಧೀನಾಧಿಕಾರಿಯಾಗಿದ್ದ ಮಹೇಶ್ ಪಿ.ಎಸ್. ಅವರನ್ನು ಕುಂದಾಪುರ ಉಪವಿಭಾಗಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.


