Thursday, October 29, 2026
Homeಕರಾವಳಿಉಡುಪಿನ. 1ರಂದು ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕದ ಅಟ್ಟಳಿಗೆ ಮುಹೂರ್ತ

ನ. 1ರಂದು ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕದ ಅಟ್ಟಳಿಗೆ ಮುಹೂರ್ತ

- Advertisement -
- Advertisement -

ಕಾರ್ಕಳ: ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕ ಮಹೋತ್ಸವದ ಅಂಗವಾಗಿ ನವೆಂಬರ್ 1ರಂದು ಬೆಳಗ್ಗೆ 8.35ರಿಂದ 8.55ರವರೆಗೆ ಅಟ್ಟಳಿಗೆ ಮುಹೂರ್ತ ನೆರವೇರಲಿದೆ.

ಕಾರ್ಕಳದ ದಾನಶಾಲೆಯಲ್ಲಿರುವ ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯ ಸನ್ನಿಧಿಯಲ್ಲಿ ಅಂದು ಬೆಳಗ್ಗೆ 7.30ರಿಂದ ಪಾದಾಭಿಷೇಕ ನಡೆಯಲಿದೆ. ಇದಕ್ಕೂ ಮುನ್ನ ಅಕ್ಟೋಬರ್ 31ರಂದು ಬೆಳಗ್ಗೆ 8 ಗಂಟೆಗೆ ಭಕ್ತಾಮರ ಆರಾಧನೆ ಆಯೋಜಿಸಲಾಗಿದೆ.

ಏಲಾಚಾರ್ಯ ಮುನಿಶ್ರೀ ಪ್ರಸಂಗಸಾಗರ ಮಹಾರಾಜರ ಸಾನ್ನಿಧ್ಯದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಕಾರ್ಕಳ ಜೈನ ಮಠದ ರಾಜಗುರು, ಧ್ಯಾನಯೋಗಿ ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿ ಹಾಗೂ ಸೊಂದಾ ಜೈನ ಮಠದ ಅಕಲಂಕಕೇಸರಿ ಸ್ವಸ್ತಿಶ್ರೀ ಭಟ್ಟಾಕಲಂಕ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿ ಉಪಸ್ಥಿತರಿರಲಿದ್ದಾರೆ.

ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ಮಹಾಮಸ್ತಕಾಭಿಷೇಕ ಸಮಿತಿ ಅಧ್ಯಕ್ಷರಾದ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಮಾರ್ಗದರ್ಶನದಲ್ಲಿ, ಸಮಿತಿ ಕಾರ್ಯಾಧ್ಯಕ್ಷ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಅವರ ನೇತೃತ್ವದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸಮಿತಿ ಪ್ರಕಟಣೆ ತಿಳಿಸಿದೆ.

- Advertisement -

Latest News

error: Content is protected !!