- Advertisement -


- Advertisement -
ಉಡುಪಿ: ಜಿಲ್ಲೆಯಾದ್ಯಂತ ನಿರಂತರ ವಿದ್ಯುತ್ ವ್ಯತ್ಯಯ ಹಾಗೂ ಮೆಸ್ಕಾಂ ಇಲಾಖೆಯ ವೈಫಲ್ಯವನ್ನು ಖಂಡಿಸಿ ಬಿಜೆಪಿ ಉಡುಪಿ ನಗರ ವತಿಯಿಂದ ಬುಧವಾರ ಸಂಜೆ ಬೃಹತ್ ಪಂಜಿನ ಮೆರವಣಿಗೆ ಮತ್ತು ಪ್ರತಿಭಟನಾ ಜಾಥಾ ನಡೆಯಿತು.
ಉಡುಪಿಯ ಬೋರ್ಡ್ ಹೈಸ್ಕೂಲ್ ಬಳಿಯಿಂದ ಆರಂಭಗೊಂಡ ಮೆರವಣಿಗೆ ಕೆ.ಎಂ. ಮಾರ್ಗವಾಗಿ ಡಯಾನಾ ಸರ್ಕಲ್ ಮೂಲಕ ಸಾಗಿ ಮೆಸ್ಕಾಂ ಕಚೇರಿ ಬಳಿ ಸಮಾಪನಗೊಂಡಿತು.
ಬಳಿಕ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ, ನಿರಂತರ ಪವರ್ ಕಟ್, ಲೋ ವೋಲ್ಟೇಜ್, ವಿದ್ಯುತ್ ವ್ಯತ್ಯಯ, ಟ್ರಾನ್ಸ್‌ಫಾರ್ಮರ್‌ಗಳ ಕೊರತೆ, ಕಳಪೆ ನಿರ್ವಹಣೆ ಹಾಗೂ ಸಿಬ್ಬಂದಿ ಅಭಾವದಿಂದ ಜಿಲ್ಲೆಯ ಜನರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಆರೋಪಿಸಿದರು.
ರಾಜ್ಯ ಸರ್ಕಾರ ಕೂಡಲೇ ವಿದ್ಯುತ್ ಸಮಸ್ಯೆಗಳನ್ನು ಪರಿಹರಿಸಿ, ಜಿಲ್ಲೆಯ ಜನರಿಗೆ ಗುಣಮಟ್ಟದ ಹಾಗೂ ನಿರಂತರ ವಿದ್ಯುತ್ ಸರಬರಾಜು ಖಚಿತಪಡಿಸಬೇಕು ಎಂದು ಅವರು ಆಗ್ರಹಿಸಿದರು.
- Advertisement -


