- Advertisement -


- Advertisement -
ಬೆಂಗಳೂರು: ರಾಜ್ಯದಲ್ಲಿ ಹಾಲಿನ ದರವನ್ನು ಪ್ರತಿ ಲೀಟರ್‌ಗೆ 8 ರೂ. ಹೆಚ್ಚಿಸಲು ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ಬರದಿಂದಾಗಿ ರೈತರು ಸಂಕಷ್ಟ ಎದುರಿಸುತ್ತಿದ್ದು, ಬೆಳೆ ಉತ್ಪಾದನೆಯ ಕೊರತೆಯಿಂದ ತೊಂದರೆ ಅನುಭವಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ರೈತರಿಗೆ ಎಲ್ಲ ರೀತಿಯಲ್ಲೂ ನೆರವು ನೀಡುವುದು ಸರ್ಕಾರದ ಧರ್ಮ ಮತ್ತು ಕರ್ತವ್ಯವಾಗಿದೆ ಎಂದು ಅವರು ಹೇಳಿದರು.
ರಾಜ್ಯದಲ್ಲಿ ಲಕ್ಷಾಂತರ ರೈತ ಕುಟುಂಬಗಳು ಹೈನುಗಾರಿಕೆಯನ್ನೇ ತಮ್ಮ ಜೀವನಾಧಾರವನ್ನಾಗಿ ಮಾಡಿಕೊಂಡಿವೆ. ಹಾಲು ಮಾರಾಟದಿಂದ ಬರುವ ಆದಾಯದ ಮೂಲಕ ಈ ಕುಟುಂಬಗಳು ವೈದ್ಯಕೀಯ ವೆಚ್ಚ ಸೇರಿದಂತೆ ದೈನಂದಿನ ಅಗತ್ಯಗಳನ್ನು ಪೂರೈಸುತ್ತಿವೆ. ಹೈನುಗಾರಿಕೆಯಿಂದ ರೈತರಿಗೆ ಕನಿಷ್ಠ ಆದಾಯದ ಭರವಸೆ ದೊರೆಯುತ್ತದೆ ಎಂದು ಅವರು ತಿಳಿಸಿದರು.
- Advertisement -


