Thursday, October 29, 2026
Homeಕರಾವಳಿಮಂಗಳೂರುಧರ್ಮಸ್ಥಳ ಸೌಜನ್ಯ ಪ್ರಕರಣ: ಎಸ್‌ಐಟಿ ನೇತೃತ್ವದಿಂದ ಹಿಂದೆ ಸರಿದ ಐಜಿಪಿ ಶಶಿಕುಮಾರ್

ಧರ್ಮಸ್ಥಳ ಸೌಜನ್ಯ ಪ್ರಕರಣ: ಎಸ್‌ಐಟಿ ನೇತೃತ್ವದಿಂದ ಹಿಂದೆ ಸರಿದ ಐಜಿಪಿ ಶಶಿಕುಮಾರ್

- Advertisement -
- Advertisement -

ಬೆಂಗಳೂರು: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ವಿಶೇಷ ತನಿಖಾ ತಂಡದ (ಎಸ್‌ಐಟಿ) ಮುಖ್ಯಸ್ಥ ಸ್ಥಾನದಿಂದ ತಮ್ಮನ್ನು ಮುಕ್ತಗೊಳಿಸುವಂತೆ ಹಿರಿಯ ಐಪಿಎಸ್ ಅಧಿಕಾರಿ, ಐಜಿಪಿ ಎನ್. ಶಶಿಕುಮಾರ್ ಅವರು ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿ-ಐಜಿಪಿ) ಎಂ.ಎ. ಸಲೀಂ ಅವರಿಗೆ ಲಿಖಿತ ಮನವಿ ಸಲ್ಲಿಸಿದ್ದಾರೆ.

ಐಜಿಪಿ ಶಶಿಕುಮಾರ್ ಅವರು ಈ ಹಿಂದೆ ಮಂಗಳೂರು ಪೊಲೀಸ್ ಕಮಿಷನರ್ ಆಗಿದ್ದ ಅವಧಿಯಲ್ಲಿ ಧರ್ಮಸ್ಥಳದ ಜೊತೆ ಒಡನಾಟ ಹೊಂದಿದ್ದರು ಎಂದು ಆರೋಪಿಸಿದ್ದ ಸೌಜನ್ಯ ಕುಟುಂಬಸ್ಥರು ಹಾಗೂ ಹೋರಾಟಗಾರರು, ಅವರ ನೇಮಕಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ಈ ವಿವಾದಗಳು ತನಿಖೆಯ ಪಾರದರ್ಶಕತೆ ಮತ್ತು ಸಾರ್ವಜನಿಕ ನಂಬಿಕೆಗೆ ಧಕ್ಕೆ ತರಬಾರದು ಎಂಬ ಉದ್ದೇಶದಿಂದ ಶಶಿಕುಮಾರ್ ಅವರೇ ಸ್ವಯಂಪ್ರೇರಿತರಾಗಿ ಈ ನಿರ್ಧಾರ ತಳೆದಿದ್ದಾರೆ.

ಈ ಬೆನ್ನಲ್ಲೇ ಎಸ್‌ಐಟಿಗೆ ಹೊಸ ಮುಖ್ಯಸ್ಥರನ್ನು ನೇಮಿಸುವ ಪ್ರಕ್ರಿಯೆಯನ್ನು ಸರ್ಕಾರ ಹಾಗೂ ಪೊಲೀಸ್ ಇಲಾಖೆ ಚುರುಕುಗೊಳಿಸಿದೆ. ಪ್ರಸ್ತುತ ಹಿರಿಯ ಐಪಿಎಸ್ ಅಧಿಕಾರಿಗಳಾದ ಲಾಭೂರಾಮ್, ಚೇತನ್ ಸಿಂಗ್ ರಾಥೋಡ್ ಹಾಗೂ ಡಾ. ಬೋರಲಿಂಗಯ್ಯ ಅವರ ಹೆಸರುಗಳು ಮುನ್ನೆಲೆಯಲ್ಲಿದ್ದು, ಈ ಪೈಕಿ ಒಬ್ಬರಿಗೆ ಜವಾಬ್ದಾರಿ ವಹಿಸಿ ಶೀಘ್ರದಲ್ಲೇ ಅಧಿಕೃತ ಆದೇಶ ಹೊರಬೀಳುವ ಸಾಧ್ಯತೆಯಿದೆ.

- Advertisement -

Latest News

error: Content is protected !!