- Advertisement -


- Advertisement -
ದೇಶದ 9.34 ಕೋಟಿಗೂ ಅಧಿಕ ರೈತರಿಗೆ ಇಂದು ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 24ನೇ ಕಂತಿನ ಹಣ ಬಿಡುಗಡೆಯಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಳಗ್ಗೆ ಗುಜರಾತಿನ ಬನಸ್ಕಾಂಠದಿಂದ ಈ ಕಂತಿನ ಹಣವನ್ನು ಬಿಡುಗಡೆ ಮಾಡಿದ್ದಾರೆ. ಈ ಯೋಜನೆಯಡಿ ಅರ್ಹ ರೈತರ ಬ್ಯಾಂಕ್ ಖಾತೆಗಳಿಗೆ ತಲಾ 2,000 ರೂ. ನೇರವಾಗಿ ಜಮೆಯಾಗಲಿದೆ.
ಒಟ್ಟು 18,690 ಕೋಟಿ ರೂ.ಗೂ ಅಧಿಕ ಮೊತ್ತವನ್ನು ರೈತರ ಖಾತೆಗಳಿಗೆ ವರ್ಗಾಯಿಸಲಾಗುತ್ತದೆ. ಪಿಎಂ ಕಿಸಾನ್ ಯೋಜನೆಯಡಿ ರೈತರಿಗೆ ಪ್ರತಿ ವರ್ಷ ಒಟ್ಟು 6,000 ರೂ. ಆರ್ಥಿಕ ನೆರವು ನೀಡಲಾಗುತ್ತದೆ.
- Advertisement -


