Friday, October 30, 2026
Homeಕರಾವಳಿಉಡುಪಿಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಸಮಾಜ ಸೇವಕ ಎ.ಸಿ. ಭಂಡಾರಿ ಸಹಿತ...

ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಸಮಾಜ ಸೇವಕ ಎ.ಸಿ. ಭಂಡಾರಿ ಸಹಿತ ಮೂರು ಮಂದಿ ಆಯ್ಕೆ: 71 ಸಾಧಕರ ಮುಡಿಗೆ ರಾಜ್ಯೋತ್ಸವ ಪ್ರಶಸ್ತಿ

- Advertisement -
- Advertisement -

ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಸಾಧಕರಿಗೆ ನೀಡಲಾಗುವ 2026ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗಳನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಶುಕ್ರವಾರ ಪ್ರಕಟಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯಿಂದ ಮೂರು ಮಂದಿ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಕರ್ನಾಟಕದ 71ನೇ ರಾಜ್ಯೋತ್ಸವ ಆಚರಣೆಯ ಅಂಗವಾಗಿ ಒಟ್ಟು 71 ಗಣ್ಯರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು 25 ಗ್ರಾಂ ಚಿನ್ನದ ಪದಕ ಹಾಗೂ ₹5 ಲಕ್ಷ ನಗದು ಬಹುಮಾನವನ್ನು ಒಳಗೊಂಡಿದೆ.

ದಕ್ಷಿಣ ಕನ್ನಡ ಜಿಲ್ಲೆಯಿಂದ ಮಾಧ್ಯಮ ಕ್ಷೇತ್ರದಲ್ಲಿ ವಿಶ್ವನಾಥ ಸುವರ್ಣ, ಸಮಾಜಸೇವೆಯಲ್ಲಿ ಎ.ಸಿ. ಭಂಡಾರಿ ಹಾಗೂ ಸಾಹಿತ್ಯ ಕ್ಷೇತ್ರದಲ್ಲಿ ಇಂದಿರಾ ಹೆಗ್ಗಡೆ ಅವರಿಗೆ 2026ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಘೋಷಿಸಲಾಗಿದೆ.

ಉಡುಪಿ ಜಿಲ್ಲೆಯಿಂದ ನ್ಯಾಯಾಂಹ ಕ್ಷೇತ್ರದಲ್ಲಿ ಶ್ರೀ ಬಿ ವಿ ಆಚಾರ್ಯ, ಯಕ್ಷಗಾನ ಕ್ಷೇತ್ರದಲ್ಲಿ ಶ್ರೀ ಗೋಪಾಲ ಗಾಣಿಗ ಅವರು ಆಯ್ಕೆಯಾಗಿದ್ದಾರೆ.

- Advertisement -

Latest News

error: Content is protected !!