- Advertisement -


- Advertisement -
ಗೋಕರ್ಣ: ಸಮುದ್ರದಲ್ಲಿ ಈಜಲು ತೆರಳಿದ್ದ ಮೂವರು ಪ್ರವಾಸಿಗರು ನೀರಿನ ಸೆಳೆತಕ್ಕೆ ಸಿಲುಕಿ ಮುಳುಗಿ ಮೃತಪಟ್ಟ ದಾರುಣ ಘಟನೆ ಗೋಕರ್ಣದ ದುಬ್ಬನಶಸಿ ಕಡಲತೀರದಲ್ಲಿ ನಡೆದಿದೆ.
ಮೃತರನ್ನು ವಿಶ್ವೇಶ್ (24), ಶೋಭಾ ದಾಸ್ (22) ಹಾಗೂ ಮೊಹಮ್ಮದ್ ಅಕ್ರಂ ಎಂದು ಗುರುತಿಸಲಾಗಿದೆ.
ಬೆಂಗಳೂರಿನಿಂದ ಸುಮಾರು 12 ಮಂದಿಯ ತಂಡವೊಂದು ಪ್ರವಾಸಕ್ಕಾಗಿ ಗೋಕರ್ಣಕ್ಕೆ ಆಗಮಿಸಿತ್ತು. ಪ್ರವಾಸದ ಭಾಗವಾಗಿ ದುಬ್ಬನಶಸಿ ಕಡಲತೀರಕ್ಕೆ ತೆರಳಿದ್ದ ತಂಡದ ಸದಸ್ಯರು ಸಮುದ್ರದಲ್ಲಿ ಈಜುತ್ತಾ ಮೋಜು-ಮಸ್ತಿಯಲ್ಲಿ ತೊಡಗಿದ್ದರು. ಈ ವೇಳೆ ಸಮುದ್ರದ ಅಲೆಗಳ ಅಬ್ಬರ ಹಾಗೂ ಬಲವಾದ ನೀರಿನ ಸೆಳೆತಕ್ಕೆ ಸಿಲುಕಿದ ಮೂವರು ದಡ ಸೇರಲಾಗದೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಗೋಕರ್ಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಸಂಗ್ರಹಿಸುತ್ತಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
- Advertisement -


