Sunday, November 1, 2026
Homeಕರಾವಳಿಮಂಗಳೂರುಕಡಬ: 5 ವರ್ಷದಿಂದ ತಲೆಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ಆರೋಪಿ ವಿಶಾಲ್ ಪೊಂಕೆ ಕೋರ್ಟ್‌ಗೆ ಹಾಜರು

ಕಡಬ: 5 ವರ್ಷದಿಂದ ತಲೆಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ಆರೋಪಿ ವಿಶಾಲ್ ಪೊಂಕೆ ಕೋರ್ಟ್‌ಗೆ ಹಾಜರು

- Advertisement -
- Advertisement -

ಕಡಬ ಪೊಲೀಸ್ ಠಾಣೆಯಲ್ಲಿ 2016ರಲ್ಲಿ ದಾಖಲಾಗಿದ್ದ ನಾಲ್ಕು ಕಳ್ಳತನ ಪ್ರಕರಣಗಳ ಆರೋಪಿ, ಕಳೆದ 5 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಮಹಾರಾಷ್ಟ್ರ ಮೂಲದ ವಿಶಾಲ್ ಪೊಂಕೆ (೩೦) ಅಕ್ಟೋಬರ್ ೩೦ರಂದು ಪುತ್ತೂರಿನ ೨ನೇ ಎಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯಕ್ಕೆ (ಸಂಚಾರಿ ನ್ಯಾಯಾಲಯ, ಕಡಬ) ಹಾಜರಾಗಿದ್ದಾರೆ.

ಈ ಪ್ರಕರಣದಲ್ಲಿ ಭಾಗಿಯಾಗಿದ್ದ ಇತರ ಐವರು ಆರೋಪಿಗಳಿಗೆ ನ್ಯಾಯಾಲಯ ಈಗಾಗಲೇ 3 ವರ್ಷಗಳ ಶಿಕ್ಷೆ ವಿಧಿಸಿತ್ತು. ಆದರೆ ವಿಶಾಲ್ ಪೊಂಕೆ ತಲೆಮರೆಸಿಕೊಂಡಿದ್ದರಿಂದ ಆತನ ವಿರುದ್ಧ ನ್ಯಾಯಾಲಯದಿಂದ ಪ್ರೊಕ್ಲಮೇಶನ್ ಹೊರಡಿಸಲಾಗಿತ್ತು. ಪ್ರಸ್ತುತ ಕೋರ್ಟ್‌ಗೆ ಹಾಜರಾದ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

- Advertisement -

Latest News

error: Content is protected !!