Monday, November 2, 2026
Homeಕರಾವಳಿಉಡುಪಿಜಿಲ್ಲಾಸ್ಪತ್ರೆಯ ಹೊಸ ಕಟ್ಟಡದ ಅನುಷ್ಠಾನ ವಿವಾದ; ಪ್ರತಿಭಟನೆ ಮಾಡುವುದು ಸುಲಭ, ಸಮಸ್ಯೆ ಬಗೆಹರಿಸುವುದು ಕಷ್ಟ; ಶಾಸಕರಿಗೆ...

ಜಿಲ್ಲಾಸ್ಪತ್ರೆಯ ಹೊಸ ಕಟ್ಟಡದ ಅನುಷ್ಠಾನ ವಿವಾದ; ಪ್ರತಿಭಟನೆ ಮಾಡುವುದು ಸುಲಭ, ಸಮಸ್ಯೆ ಬಗೆಹರಿಸುವುದು ಕಷ್ಟ; ಶಾಸಕರಿಗೆ ಯು.ಟಿ. ಖಾದರ್ ತಿರುಗೇಟು!

- Advertisement -
- Advertisement -

ಉಡುಪಿ: ಜಿಲ್ಲಾ ಆಸ್ಪತ್ರೆಯ ಹೊಸ ಕಟ್ಟಡದ ಅನುಷ್ಠಾನ ಕುರಿತು ಆರೋಗ್ಯ ಸಚಿವ ಯು.ಟಿ. ಖಾದರ್ ಪ್ರತಿಕ್ರಿಯೆ ನೀಡಿದ್ದು, ಪ್ರತಿಭಟನೆ ಮಾಡುವುದು ಸುಲಭ, ಆದರೆ ಸಮಸ್ಯೆ ಬಗೆಹರಿಸುವುದು ಕಷ್ಟ. ಜನರು ಶಾಸಕರನ್ನು ಆಯ್ಕೆ ಮಾಡುವುದು ಪ್ರತಿಭಟನೆ ಮಾಡುವುದಕ್ಕಲ್ಲ. ಸಮಸ್ಯೆಗಳನ್ನು ಬಗೆಹರಿಸುವುದಕ್ಕಾಗಿ. ಸಮಸ್ಯೆ ಎದುರಾದಾಗ ಅಧಿಕಾರಿಗಳೊಂದಿಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳುವುದು ಜನಪ್ರತಿನಿಧಿಗಳ ಜವಾಬ್ದಾರಿ ಎಂದು ಹೇಳಿದರು.

ಉಡುಪಿ ಜಿಲ್ಲಾ ಆಸ್ಪತ್ರೆಗೆ ಅಗತ್ಯವಿರುವ ಪೀಠೋಪಕರಣಗಳ ಖರೀದಿಗೆ ಟೆಂಡರ್ ಕರೆಯಲಾಗಿದೆ. ಹೆಚ್ಚುವರಿ ಸಿಬ್ಬಂದಿಯ ಅಗತ್ಯವಿದ್ದು, ಈ ಬಗ್ಗೆ ಮುಖ್ಯಮಂತ್ರಿಗಳ ಬಳಿ ಮನವಿ ಮಾಡಲಾಗಿದೆ. ಹಳೆಯ ಆಸ್ಪತ್ರೆಯನ್ನು ಹೊಸ ಕಟ್ಟಡಕ್ಕೆ ಸ್ಥಳಾಂತರಿಸಲೇಬೇಕು. ಸರ್ಕಾರಿ ವ್ಯವಸ್ಥೆ ಹಾಳಾಗಬಾರದು. ಎಲ್ಲಾ ಪ್ರಕ್ರಿಯೆಗಳಿಗೆ ಸ್ವಲ್ಪ ಸಮಯ ಬೇಕಾಗುತ್ತದೆ. ಹಳೆಯ ಆಸ್ಪತ್ರೆಯಲ್ಲಿರುವ ಎಲ್ಲಾ ಸೌಲಭ್ಯಗಳನ್ನು ಹೊಸ ಕಟ್ಟಡದಲ್ಲೂ ಮುಂದುವರಿಸಲಾಗುವುದು. ಜೊತೆಗೆ ಹೊಸ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ತಿಳಿಸಿದರು.

ರಾಜ್ಯ ಸರ್ಕಾರ ಜನಸಾಮಾನ್ಯರಿಗೆ ಅಗತ್ಯವಿರುವ ಸೌಲಭ್ಯಗಳನ್ನು ಒದಗಿಸುತ್ತಿದೆ. ಅಭಿವೃದ್ಧಿ ಕಾರ್ಯಗಳಿಗೆ ಬೇಕಾದಷ್ಟು ಅನುದಾನ ನೀಡಲಾಗಿದೆ. ಆದರೆ ಕಬ್ಬು ಬೆಳೆಗಾರರಿಗೆ ಕೇಂದ್ರ ಸರ್ಕಾರ ನೀಡಬೇಕಾದ ಹಣವನ್ನು ರಾಜ್ಯ ಸರ್ಕಾರ ಭರಿಸಲು ಸಾಧ್ಯವಿಲ್ಲ. ಕೇಂದ್ರದ ಹೊಣೆಯನ್ನು ರಾಜ್ಯ ಸರ್ಕಾರ ಹೊರಲು ಸಾಧ್ಯವೇ ಎಂದು ಪ್ರಶ್ನಿಸಿದರು.

ಖಾಸಗಿ ಆಸ್ಪತ್ರೆಗಳು ರೋಗಿಗಳಿಗೆ ಸ್ಪಷ್ಟವಾಗಿ ಕಾಣುವಂತೆ ಚಿಕಿತ್ಸಾ ದರಪಟ್ಟಿಯನ್ನು ಪ್ರದರ್ಶಿಸಬೇಕು. ಪ್ರಮುಖ ಚಿಕಿತ್ಸೆಗಳ ಶುಲ್ಕವನ್ನು ಕಡ್ಡಾಯವಾಗಿ ನಮೂದಿಸಬೇಕು. ಇದಕ್ಕಾಗಿ ಸರ್ಕಾರವೇ ಒತ್ತಡ ಹೇರಬೇಕೇ? ಖಾಸಗಿ ಆಸ್ಪತ್ರೆಗಳಿಗೂ ಸಾಮಾಜಿಕ ಜವಾಬ್ದಾರಿ ಇರಬೇಕು ಎಂದು ಹೇಳಿದರು.

ಖಾಸಗಿ ಆಸ್ಪತ್ರೆಗಳು ಉತ್ತಮ ಸೇವೆ ನೀಡುತ್ತಿವೆ. ಆದರೆ ಆರೋಗ್ಯ ಕ್ಷೇತ್ರದಲ್ಲಿ ವಿದೇಶಿ ಹೂಡಿಕೆಗೆ ಅವಕಾಶ ನೀಡಬಾರದು. ಇದರಿಂದ ರೋಗಿಗಳಿಗೆ ತೊಂದರೆಯಾಗುವ ಸಾಧ್ಯತೆಯಿದೆ ಎಂದು ಸಚಿವ ಯು.ಟಿ. ಖಾದರ್ ತಿಳಿಸಿದರು.

- Advertisement -

Latest News

error: Content is protected !!