Monday, November 2, 2026
Homeತಾಜಾ ಸುದ್ದಿನಂದಿನಿ ಮೊಸರಿನ ದರ ಲೀಟರ್‌ಗೆ 2 ರೂ. ಇಳಿಕೆ ಮಾಡಲು ಸಿಎಂ ಡಿಕೆ ಶಿವಕುಮಾರ್ ಸೂಚನೆ

ನಂದಿನಿ ಮೊಸರಿನ ದರ ಲೀಟರ್‌ಗೆ 2 ರೂ. ಇಳಿಕೆ ಮಾಡಲು ಸಿಎಂ ಡಿಕೆ ಶಿವಕುಮಾರ್ ಸೂಚನೆ

- Advertisement -
- Advertisement -

ಹಾಲು ಮತ್ತು ಮೊಸರಿನ ದರ ಏರಿಕೆಗೆ ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ನಂದಿನಿ ಮೊಸರಿನ ದರವನ್ನು ಪ್ರತಿ ಲೀಟರ್‌ಗೆ 2 ರೂ. ಕಡಿಮೆ ಮಾಡುವಂತೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೂಚನೆ ನೀಡಿದ್ದಾರೆ.

ಇತ್ತೀಚೆಗೆ ನಂದಿನಿ ಮೊಸರಿನ ಅರ್ಧ ಲೀಟರ್ ಪ್ಯಾಕೆಟ್ ದರವನ್ನು 28 ರೂ.ನಿಂದ 34 ರೂ.ಗೆ ಹಾಗೂ ಒಂದು ಲೀಟರ್ ಪ್ಯಾಕೆಟ್ ದರವನ್ನು 54 ರೂ.ನಿಂದ 68 ರೂ.ಗೆ ಹೆಚ್ಚಿಸಲಾಗಿತ್ತು. ದರ ಏರಿಕೆ ವಿರುದ್ಧ ಸಾರ್ವಜನಿಕರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಡಿಕೆ ಶಿವಕುಮಾರ್, ಕೆಎಂಎಫ್ ಹಾಗೂ ವಿವಿಧ ಜಿಲ್ಲಾ ಹಾಲು ಒಕ್ಕೂಟಗಳ ಪದಾಧಿಕಾರಿಗಳು ಇಂದು ತಮ್ಮನ್ನು ಭೇಟಿಯಾಗಿ ಹಾಲಿನ ದರ ಏರಿಕೆ ನಿರ್ಧಾರಕ್ಕೆ ಧನ್ಯವಾದ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಮೊಸರಿನ ದರವನ್ನು ಪ್ರತಿ ಲೀಟರ್‌ಗೆ 2 ರೂ. ಕಡಿಮೆ ಮಾಡುವಂತೆ ಸೂಚನೆ ನೀಡುವುದಾಗಿ ತಿಳಿಸಿದರು. ಅಲ್ಲದೆ, ಹಾಲಿನ ದರವು ಪ್ಯಾಕೆಟ್‌ಗಳ ಆಧಾರದ ಮೇಲೆ ನಿರ್ಧಾರವಾಗಲಿದ್ದು, ಈ ಕುರಿತು ಅಧಿಕಾರಿಗಳು ಹೆಚ್ಚಿನ ಮಾಹಿತಿ ನೀಡಲಿದ್ದಾರೆ ಎಂದು ಹೇಳಿದರು.

- Advertisement -

Latest News

error: Content is protected !!