Tuesday, November 3, 2026
Homeಕರಾವಳಿನಿಲ್ಲಿಸಿದ್ದ ಲಾರಿಗೆ ಬೈಕ್ ಢಿಕ್ಕಿ ಹೊಡೆದು ಇಬ್ಬರು ಯುವಕರು ಸಾವು

ನಿಲ್ಲಿಸಿದ್ದ ಲಾರಿಗೆ ಬೈಕ್ ಢಿಕ್ಕಿ ಹೊಡೆದು ಇಬ್ಬರು ಯುವಕರು ಸಾವು

- Advertisement -
- Advertisement -

ಕಾಸರಗೋಡು: ನಿಲ್ಲಿಸಿದ್ದ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಮೃತಪಟ್ಟಿರುವ ದಾರುಣ ಘಟನೆ ಕಾಸರಗೋಡಿನ ಪಡನ್ನಕ್ಕಾಡ್‌ನ ನೆಹರೂ ಕಾಲೇಜು ಮುಂಭಾಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ರಾತ್ರಿ ನಡೆದಿದೆ.

ಮೃತರನ್ನು ನೀಲೇಶ್ವರದ ಪಡಿಂಜಾಟಂ ಕೊಳುವಲ್ ನಿವಾಸಿಗಳಾದ ಅನುರಾಗ್ (22) ಮತ್ತು ಆನಂದಕೃಷ್ಣನ್ (24) ಎಂದು ಗುರುತಿಸಲಾಗಿದೆ.

ಇಬ್ಬರೂ ಕಾಞಂಗಾಡ್‌ನ ತಿರುವತ್ತ್ ಅರಯಿಲ್ ಭಗವತಿ ದೇವಸ್ಥಾನದಲ್ಲಿ ನಡೆಯುತ್ತಿದ್ದ ತೆಯ್ಯಂ ವೀಕ್ಷಿಸಲು ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ರಾತ್ರಿ ಸುಮಾರು 9 ಗಂಟೆಗೆ ಈ ಅಪಘಾತ ಸಂಭವಿಸಿದೆ. ರಸ್ತೆಯ ಬದಿಯಲ್ಲಿ ನಿಲ್ಲಿಸಲಾಗಿದ್ದ ಲಾರಿಗೆ ಬೈಕ್ ಡಿಕ್ಕಿ ಹೊಡೆದಿದೆ.

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರನ್ನು ತಕ್ಷಣ ಕಾಞಂಗಾಡ್ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತದೇಹಗಳನ್ನು ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ.

ಮೃತ ಅನುರಾಗ್ ನೀಲೇಶ್ವರದ ವಸಂತ್ ಹೋಟೆಲ್‌ನಲ್ಲಿ ಕ್ಯಾಷಿಯರ್ ಆಗಿ ಕೆಲಸ ಮಾಡುತ್ತಿದ್ದರು.

- Advertisement -

Latest News

error: Content is protected !!