Tuesday, November 3, 2026
Homeಕರಾವಳಿಉಡುಪಿನ.3ರಿಂದ ನ.7ರವರೆಗೆ ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ ಜಿಲ್ಲಾಧಿಕಾರಿ; ❌ಸಭೆ, ಮೆರವಣಿಗೆ, ಪ್ರತಿಭಟನೆ...

ನ.3ರಿಂದ ನ.7ರವರೆಗೆ ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ ಜಿಲ್ಲಾಧಿಕಾರಿ; ❌ಸಭೆ, ಮೆರವಣಿಗೆ, ಪ್ರತಿಭಟನೆ ಹಾಗೂ ಸಾರ್ವಜನಿಕ ಕಾರ್ಯಕ್ರಮಗಳಿಗೆ ನಿಷೇಧ

- Advertisement -
- Advertisement -

ಉಡುಪಿ: ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನವೆಂಬರ್ 3ರ ಬೆಳಗ್ಗೆ 6 ಗಂಟೆಯಿಂದ ನವೆಂಬರ್ 7ರ ಬೆಳಗ್ಗೆ 10 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ–2023ರ ಕಲಂ 163ರ ಅಡಿಯಲ್ಲಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಸ್ವರೂಪ ಟಿ.ಕೆ. ಅವರು ಈ ಆದೇಶ ಹೊರಡಿಸಿದ್ದಾರೆ.

ನಿಷೇಧಾಜ್ಞೆ ಜಾರಿಯಲ್ಲಿರುವ ಅವಧಿಯಲ್ಲಿ ಅನುಮತಿಯಿಲ್ಲದೆ ಸಭೆ, ಮೆರವಣಿಗೆ, ಪ್ರತಿಭಟನೆ ಹಾಗೂ ಸಾರ್ವಜನಿಕ ಕಾರ್ಯಕ್ರಮಗಳನ್ನು ನಡೆಸುವುದನ್ನು ನಿಷೇಧಿಸಲಾಗಿದೆ. ಐದು ಅಥವಾ ಅದಕ್ಕಿಂತ ಹೆಚ್ಚು ಜನರು ಗುಂಪುಗೂಡುವುದು, ಪ್ರಚೋದನಕಾರಿ ಭಾಷಣ ಹಾಗೂ ಘೋಷಣೆಗಳನ್ನು ಕೂಗುವುದು, ಶಾಂತಿ ಕದಡುವ ಚಟುವಟಿಕೆಗಳಲ್ಲಿ ತೊಡಗುವುದು ಮತ್ತು ಅಪಾಯಕಾರಿ ವಸ್ತುಗಳನ್ನು ಕೊಂಡೊಯ್ಯುವುದು ಅಥವಾ ಸಂಗ್ರಹಿಸುವುದಕ್ಕೂ ನಿರ್ಬಂಧ ವಿಧಿಸಲಾಗಿದೆ.

ಸಾರ್ವಜನಿಕರು ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಜಿಲ್ಲಾಡಳಿತದ ಆದೇಶವನ್ನು ಪಾಲಿಸುವಂತೆ ಸೂಚಿಸಲಾಗಿದೆ.

- Advertisement -

Latest News

error: Content is protected !!