Tuesday, November 3, 2026
Homeಕರಾವಳಿವಕೀಲರ ಮೇಲಿನ ಹಲ್ಲೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಮಂಗಳೂರಿನಲ್ಲಿ ಕೋರ್ಟ್ ಕಲಾಪ ಬಹಿಷ್ಕರಿಸಿ ವಕೀಲರ ಆಕ್ರೋಶ

ವಕೀಲರ ಮೇಲಿನ ಹಲ್ಲೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಮಂಗಳೂರಿನಲ್ಲಿ ಕೋರ್ಟ್ ಕಲಾಪ ಬಹಿಷ್ಕರಿಸಿ ವಕೀಲರ ಆಕ್ರೋಶ

- Advertisement -
- Advertisement -

ಮಂಗಳೂರು: ರಾಜ್ಯದಲ್ಲಿ ವಕೀಲರ ಮೇಲೆ ನಿರಂತರವಾಗಿ ನಡೆಯುತ್ತಿರುವ ಹಲ್ಲೆ ಹಾಗೂ ಕೊಲೆ ಯತ್ನದ ಘಟನೆಗಳನ್ನು ಖಂಡಿಸಿ ಮಂಗಳವಾರ ರಾಜ್ಯಾದ್ಯಂತ ವಕೀಲರು ಪ್ರತಿಭಟನೆ ನಡೆಸಿದರು.

ಬೆಂಗಳೂರು ವಕೀಲರ ಪರಿಷತ್ ಹಾಗೂ ವಕೀಲರ ಸಂಘದ ನಿರ್ಣಯದಂತೆ ನಡೆದ ಪ್ರತಿಭಟನೆಯ ಭಾಗವಾಗಿ ಮಂಗಳೂರಿನ ವಕೀಲರ ಸಂಘದ ಸದಸ್ಯರು ನ್ಯಾಯಾಲಯದ ಕಲಾಪಗಳನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು.

ಸುಮಾರು 15 ದಿನಗಳ ಹಿಂದೆ ಮಂಜುನಾಥ್ ಎಂಬ ಯುವ ವಕೀಲರನ್ನು ಮನೆಯೊಳಗೆ ನುಗ್ಗಿ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಇದಾದ ಬಳಿಕ ಶ್ರೀರಾಮ್ ಎಂಬ ವಕೀಲರ ಕೊಲೆ ಹಾಗೂ ವೆಂಕಟರಮಣ ಎಂಬ ವಕೀಲರ ಹತ್ಯೆಗೆ ಯತ್ನ ನಡೆದಿರುವ ಘಟನೆಗಳು ವಕೀಲರ ವಲಯದಲ್ಲಿ ಆತಂಕ ಮೂಡಿಸಿವೆ.

ವಕೀಲರ ಮೇಲಿನ ಇಂತಹ ದಾಳಿಗಳನ್ನು ತಕ್ಷಣವೇ ತಡೆಯಬೇಕು. ವಕೀಲರಿಗೆ ಸೂಕ್ತ ರಕ್ಷಣೆ ಒದಗಿಸುವ ನಿಟ್ಟಿನಲ್ಲಿ ವಕೀಲರ ರಕ್ಷಣಾ ಕಾಯ್ದೆಯನ್ನು ಜಾರಿಗೆ ತರಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ವಕೀಲರ ಸಂಘದ ಅಧ್ಯಕ್ಷ ಜಗದೀಶ್ ಶೇಣವ ಸೇರಿದಂತೆ ಹಲವು ವಕೀಲರು ಉಪಸ್ಥಿತರಿದ್ದರು.

- Advertisement -

Latest News

error: Content is protected !!