Tuesday, November 3, 2026
Homeಆರಾಧನಾಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಭೇಟಿ; ನಾಡಿನ ಸುಭಿಕ್ಷೆ, ಶಾಂತಿ...

ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಭೇಟಿ; ನಾಡಿನ ಸುಭಿಕ್ಷೆ, ಶಾಂತಿ ಮತ್ತು ಸಮೃದ್ಧಿಗಾಗಿ ವಿಶೇಷ ಪ್ರಾರ್ಥನೆ

- Advertisement -
- Advertisement -

ಮಂಗಳೂರು: ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವಿಯ ದರ್ಶನ ಪಡೆದರು.

ಈ ಸಂದರ್ಭದಲ್ಲಿ ನಾಡಿನ ಸುಭಿಕ್ಷೆ, ಶಾಂತಿ, ಸಮೃದ್ಧಿ ಹಾಗೂ ಜನರ ಕಲ್ಯಾಣಕ್ಕಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ದೇವಸ್ಥಾನದ ವತಿಯಿಂದ ಅವರಿಗೆ ಆತ್ಮೀಯ ಸ್ವಾಗತ ನೀಡಿ ಗೌರವಿಸಲಾಯಿತು. ಬಳಿಕ ಶೇಷವಸ್ತ್ರ ಹಾಗೂ ಪ್ರಸಾದವನ್ನು ನೀಡಿ ಸನ್ಮಾನಿಸಲಾಯಿತು.

ಈ ವೇಳೆ ಕಮಲಾದೇವಿಪ್ರಸಾದ್ ಆಸ್ರಣ್ಣ, ಹರಿನಾರಾಯಣ ಆಸ್ರಣ್ಣ, ಸದಾನಂದ ಆಸ್ರಣ್ಣ ಸೇರಿದಂತೆ ದೇವಸ್ಥಾನದ ಪ್ರಮುಖರು ಉಪಸ್ಥಿತರಿದ್ದರು.

- Advertisement -

Latest News

error: Content is protected !!