- Advertisement -


- Advertisement -
ಮಂಗಳೂರು: ನಗರದ ಬೈಕಂಪಾಡಿ ಬಳಿ ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದ ಲಾರಿಯನ್ನು ಪಣಂಬೂರು ಪೊಲೀಸರು ತಡೆದು ಕಾರ್ಯಾಚರಣೆ ನಡೆಸಿದ್ದಾರೆ.
ಬುಧವಾರ ಮುಂಜಾನೆ ಬಜರಂಗದಳದ ಕಾರ್ಯಕರ್ತರು ನೀಡಿದ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿ ಲಾರಿಯನ್ನು ತಪಾಸಣೆಗೊಳಪಡಿಸಿದ್ದಾರೆ. ಈ ವೇಳೆ ಹಿಂಸಾತ್ಮಕ ರೀತಿಯಲ್ಲಿ ಸಾಗಿಸಲಾಗುತ್ತಿದ್ದ 16 ಗೋವುಗಳನ್ನು ರಕ್ಷಿಸಲಾಗಿದೆ.
KA-19-AB-2715 ನೋಂದಣಿ ಸಂಖ್ಯೆಯ ಲಾರಿಯಲ್ಲಿ ಗೋವುಗಳನ್ನು ಸಾಗಿಸಲಾಗುತ್ತಿತ್ತು. ಬೈಕಂಪಾಡಿ ಪರಿಸರದಲ್ಲಿ ಪಣಂಬೂರು ಪೊಲೀಸರು ತಕ್ಷಣ ಕಾರ್ಯಾಚರಣೆ ನಡೆಸಿ ಗೋವುಗಳನ್ನು ರಕ್ಷಿಸಿದ್ದಾರೆ.
ಈ ಭಾಗದಲ್ಲಿ ಅಕ್ರಮ ಗೋ ಸಾಗಾಟ ನಿರಂತರವಾಗಿ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.
- Advertisement -


