- Advertisement -
- Advertisement -
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದಿನ ದಿನಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಭಾರತೀಯ ಹವಾಮಾನ ಇಲಾಖೆ ಯಲ್ಲೋ ಅಲರ್ಟ್ ಘೋಷಿಸಿದೆ.
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಹವಾಮಾನ ಬದಲಾವಣೆಯಿಂದಾಗಿ ನೈಋತ್ಯ ಮಾನ್ಸೂನ್ ಮತ್ತೆ ಚುರುಕುಗೊಂಡಿದೆ. ಹೀಗಾಗಿ ಜಿಲ್ಲೆಯಾದ್ಯಂತ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದೆ.
ಬುಧವಾರ ಬೆಳಗ್ಗಿನಿಂದಲೇ ಮಂಗಳೂರು ನಗರ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣ ಕಂಡುಬಂದಿದ್ದು, ಸಂಜೆ ಉತ್ತಮ ಮಳೆಯಾಗಿದೆ. ಸುಳ್ಯ, ಪುತ್ತೂರು ಹಾಗೂ ಬೆಳ್ತಂಗಡಿ ತಾಲೂಕಿನ ಹಲವು ಭಾಗಗಳಲ್ಲಿ ಭಾರಿ ಮಳೆಯಾಗಿದೆ. ಚಾರ್ಮಾಡಿ, ಶಿರಾಡಿ ಮತ್ತು ಆಗುಂಬೆ ಘಟ್ಟ ಪ್ರದೇಶಗಳಲ್ಲೂ ಮಳೆ ಅಬ್ಬರಿಸಿದೆ.
ಹವಾಮಾನ ಇಲಾಖೆಯ ಮುನ್ಸೂಚನೆ ಹಿನ್ನೆಲೆಯಲ್ಲಿ, ವಿಶೇಷವಾಗಿ ಪಶ್ಚಿಮ ಘಟ್ಟಗಳ ತಪ್ಪಲಿನ ದುರ್ಬಲ ಪ್ರದೇಶಗಳಲ್ಲಿ ವಾಸಿಸುವ ಜನರು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
- Advertisement -


