Thursday, November 5, 2026
Homeಕರಾವಳಿಗೇರು ತೋಟದಲ್ಲಿ ಅಂಗನವಾಡಿ ಶಿಕ್ಷಕಿಯ ಮೃತದೇಹ ಪತ್ತೆ

ಗೇರು ತೋಟದಲ್ಲಿ ಅಂಗನವಾಡಿ ಶಿಕ್ಷಕಿಯ ಮೃತದೇಹ ಪತ್ತೆ

- Advertisement -
- Advertisement -

ಕಾಸರಗೋಡು: ಆದೂರು ಸಮೀಪದ ಬೇಂಗತ್ತಡ್ಕದಲ್ಲಿರುವ ಗೇರು ನಿಗಮದ ತೋಟದಲ್ಲಿ ಅಂಗನವಾಡಿ ಶಿಕ್ಷಕಿಯೊಬ್ಬರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. 

ಬೇಂಗತ್ತಡ್ಕ ನಿವಾಸಿ ಬೇಬಿ (46) ಮೃತ ಮಹಿಳೆ.

ಅಂಗನವಾಡಿ ಸಮೀಪದಲ್ಲಿರುವ ಗೇರು ನಿಗಮದ ತೋಟದಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ವಿಷ ಸೇವನೆಯಿಂದ ಮೃತಪಟ್ಟಿರಬಹುದು ಎಂದು ಪ್ರಾಥಮಿಕವಾಗಿ ಶಂಕಿಸಲಾಗಿದೆ.

ವಿಷಯ ತಿಳಿಯುತ್ತಿದ್ದಂತೆ ಆದೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಮೃತದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಗೆ ರವಾನಿಸಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.

ಈ ಸಂಬಂಧ ಆದೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಸಾವಿಗೆ ನಿಖರವಾದ ಕಾರಣ ತಿಳಿಯಲು ತನಿಖೆ ಮುಂದುವರಿಸಿದ್ದಾರೆ.

- Advertisement -

Latest News

error: Content is protected !!