- Advertisement -
- Advertisement -
ಬೆಂಗಳೂರು: ರಾಜ್ಯ ಸರ್ಕಾರದ ಬಸ್ ಪ್ರಯಾಣ ದರ ಏರಿಕೆ ನಿರ್ಧಾರವನ್ನು ಖಂಡಿಸಿ ಬಿಜೆಪಿ ನಾಯಕರು ಇಂದು ಮೆಜೆಸ್ಟಿಕ್‌ನಲ್ಲಿ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು. ಬಿಜೆಪಿ ಕಾರ್ಯಕರ್ತರು ಭಿಕ್ಷೆ ಬೇಡುವ ಮೂಲಕ ಸರ್ಕಾರದ ಬೆಲೆ ಏರಿಕೆ ನೀತಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಛಲವಾದಿ ನಾರಾಯಣಸ್ವಾಮಿ, ಶಾಸಕ ಎಸ್. ರಘು, ಸಂಸದರಾದ ಪಿ.ಸಿ. ಮೋಹನ್, ಬ್ರಿಜೇಶ್ ಚೌಟ ಹಾಗೂ ಅರವಿಂದ್ ಬೆಲ್ಲದ್ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.
ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಎದುರು ಜಮಾಯಿಸಿದ ಪ್ರತಿಭಟನಾಕಾರರು, ಘೋಷಣೆಗಳನ್ನು ಕೂಗುವ ಬದಲು ಭಿಕ್ಷೆ ಬೇಡುವ ಹಾಡುಗಳನ್ನು ಹಾಡುತ್ತಾ ಸರ್ಕಾರದ ನಿರ್ಧಾರವನ್ನು ವ್ಯಂಗ್ಯವಾಡಿದರು.
ಆರ್. ಅಶೋಕ್ ಅವರು ಬಸ್ ಪ್ರಯಾಣಿಕರಿಗೆ ಗುಲಾಬಿ ಹೂಗಳನ್ನು ವಿತರಿಸಿ, ಬಸ್ ದರ ಏರಿಕೆ ವಿರುದ್ಧದ ಹೋರಾಟಕ್ಕೆ ಸಾರ್ವಜನಿಕರ ಬೆಂಬಲ ಕೋರಿದರು.
- Advertisement -


