- Advertisement -
- Advertisement -
ಉಡುಪಿ: ಪ್ರದೀಪ್ ಪೂಜಾರಿ ಪ್ರಕರಣದ ನಿರ್ವಹಣೆಯಲ್ಲಿ ಕರ್ತವ್ಯ ನಿರ್ಲಕ್ಷ್ಯ ತೋರಿದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ವಿರುದ್ಧ ಇಲಾಖೆ ಶಿಸ್ತು ಕ್ರಮ ಕೈಗೊಂಡಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ನಡೆಸಿದ ವಿಚಾರಣೆಯ ವರದಿಯನ್ನು ಪಶ್ಚಿಮ ವಲಯದ ಪೊಲೀಸ್ ಉಪ ಮಹಾನಿರೀಕ್ಷಕರಿಗೆ (ಡಿಐಜಿ) ಸಲ್ಲಿಸಲಾಗಿದೆ. ವರದಿಯ ಆಧಾರದ ಮೇಲೆ ಹಿರಿಯಡ್ಕ ಪೊಲೀಸ್ ಠಾಣೆಯ ಪಿಎಸ್‌ಐ ಅವರನ್ನು ಪಶ್ಚಿಮ ವಲಯದ ಡಿಐಜಿ ಕಚೇರಿಗೆ ವರ್ಗಾಯಿಸಲಾಗಿದ್ದು, ಅವರ ವಿರುದ್ಧ ಶಿಸ್ತು ಕ್ರಮ ಆರಂಭಿಸಲಾಗಿದೆ.
ಇನ್ನು, ಆಸ್ಪತ್ರೆಯಲ್ಲಿ ಭದ್ರತಾ ಕರ್ತವ್ಯ ನಿರ್ವಹಿಸುತ್ತಿದ್ದ ಇಬ್ಬರು ಪೊಲೀಸ್ ಸಿಬ್ಬಂದಿ ಕರ್ತವ್ಯದ ವೇಳೆ ನಿರ್ಲಕ್ಷ್ಯ ತೋರಿರುವುದು ಮಹಿಳಾ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರು ಸಲ್ಲಿಸಿದ ವರದಿಯಲ್ಲಿ ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಇಬ್ಬರನ್ನೂ ಅಮಾನತುಗೊಳಿಸಲಾಗಿದ್ದು, ಅವರ ವಿರುದ್ಧವೂ ಇಲಾಖಾ ಶಿಸ್ತು ಕ್ರಮ ಜರುಗಿಸುವ ಪ್ರಕ್ರಿಯೆ ಮುಂದುವರಿದಿದೆ.
- Advertisement -


