- Advertisement -
- Advertisement -
ಮಂಡ್ಯ: ಜಿಲ್ಲೆಯ ಇಂಡುವಾಳು ಸಮೀಪ ಚಲಿಸುತ್ತಿದ್ದ ರೈಲಿಗೆ ಸಿಲುಕಿ ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ (ನ.6) ನಡೆದಿದೆ. ಘಟನೆಯ ತೀವ್ರತೆಗೆ ಇಬ್ಬರ ದೇಹಗಳು ಛಿದ್ರಗೊಂಡಿವೆ.

ಮೃತರನ್ನು ಬೆಂಗಳೂರಿನ ಸಹನ (25) ಹಾಗೂ ಮಂಡ್ಯದ ರಾಹುಲ್ (30) ಎಂದು ಗುರುತಿಸಲಾಗಿದೆ. ಸಹನ ಅವರಿಗೆ ಈಗಾಗಲೇ ಮದುವೆಯಾಗಿದ್ದು, ಇಬ್ಬರು ಮಕ್ಕಳಿದ್ದಾರೆ ಎನ್ನಲಾಗಿದೆ. ರಾಹುಲ್ ಅವರ ವೈಯಕ್ತಿಕ ಹಿನ್ನೆಲೆಯ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.
ಘಟನಾ ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ಮಂಡ್ಯ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
- Advertisement -


