- Advertisement -
- Advertisement -
ಮಂಗಳೂರು: ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 73ರ ಅಡ್ಯಾರ್ ಕಣ್ಣೂರಿನಲ್ಲಿ ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಪಲ್ಟಿಯಾದ ಘಟನೆ ಶುಕ್ರವಾರ ರಾತ್ರಿ ನಡೆದಿದೆ.
ಅಡ್ಯಾರ್ ಕಣ್ಣೂರಿನ ಮಸೀದಿ ಸಮೀಪ ಈ ಘಟನೆ ಸಂಭವಿಸಿದೆ. ಮಾಹಿತಿ ತಿಳಿದ ತಕ್ಷಣ ಅಗ್ನಿಶಾಮಕ ದಳದ ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ನಡೆಸಿದರು.
ಲಾರಿಯು ಮಂಗಳೂರಿನಿಂದ ಬೆಂಗಳೂರಿಗೆ ಗ್ಯಾಸ್ ಸಿಲಿಂಡರ್‌ಗಳನ್ನು ಸಾಗಿಸುತ್ತಿತ್ತು ಎಂದು ತಿಳಿದುಬಂದಿದೆ. ಘಟನೆಯಲ್ಲಿ ಚಾಲಕ ಅಪಾಯದಿಂದ ಪಾರಾಗಿದ್ದಾರೆ.
ಲಾರಿ ಪಲ್ಟಿಯಾದ ಪರಿಣಾಮ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತು. ಬಳಿಕ ಸಂಚಾರ ಪೊಲೀಸರು ವಾಹನಗಳನ್ನು ಪರ್ಯಾಯ ರಸ್ತೆಗಳಲ್ಲಿ ಸಂಚರಿಸಲು ವ್ಯವಸ್ಥೆ ಮಾಡಿದರು.
- Advertisement -


