Saturday, November 7, 2026
Homeಕರಾವಳಿಕಟ್ಟಡದ ಗೋಡೆಗೆ ಬಣ್ಣ ಬಳಿಯುವಾಗ ಆಯತಪ್ಪಿ ಕೆಳಕ್ಕೆ ಬಿದ್ದು ವ್ಯಕ್ತಿ ಸಾವು

ಕಟ್ಟಡದ ಗೋಡೆಗೆ ಬಣ್ಣ ಬಳಿಯುವಾಗ ಆಯತಪ್ಪಿ ಕೆಳಕ್ಕೆ ಬಿದ್ದು ವ್ಯಕ್ತಿ ಸಾವು

- Advertisement -
- Advertisement -

ಬಂಟ್ವಾಳ: ಕಟ್ಟಡದ ಗೋಡೆಗೆ ಬಣ್ಣ ಬಳಿಯುವಾಗ ಆಯತಪ್ಪಿ ಕೆಳಕ್ಕೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಪುದು ಗ್ರಾಮದ ಫರಂಗಿಪೇಟೆಯಲ್ಲಿ ನಡೆದಿದೆ.

ಮೃತರನ್ನು ಇಳಕಲ್ ತಾಲೂಕಿನ ಇನಾಂ ಕಡಿವಾಳ ಗ್ರಾಮದ ನಿವಾಸಿ, ಪ್ರಸ್ತುತ ಮಂಗಳೂರಿನ ಪಡೀಲ್ ಮೇಘಾ ನಗರದ 4ನೇ ಕ್ರಾಸ್‌ನಲ್ಲಿ ವಾಸವಾಗಿದ್ದ ಕೂಡ್ಲಪ್ಪ ಹಡಪದ (56) ಎಂದು ಗುರುತಿಸಲಾಗಿದೆ.

ಕೂಡ್ಲಪ್ಪ ಅವರು ಫರಂಗಿಪೇಟೆಯಲ್ಲಿ ಕಟ್ಟಿಂಗ್ ಶಾಪ್ ನಡೆಸುತ್ತಿದ್ದರು. ಎಂದಿನಂತೆ ಬೆಳಗ್ಗೆ ಕೆಲಸಕ್ಕೆ ತೆರಳಿದ್ದ ಅವರು, ಸಂಜೆ ಅಂಗಡಿಯ ಕಟ್ಟಡದ ಗೋಡೆಗೆ ಬಣ್ಣ ಬಳಿಯುವ ಕೆಲಸ ಮಾಡುತ್ತಿದ್ದರು. ಈ ವೇಳೆ ಆಕಸ್ಮಿಕವಾಗಿ ಆಯತಪ್ಪಿ ಮೇಲಿನಿಂದ ಕೆಳಕ್ಕೆ ಬಿದ್ದಿದ್ದಾರೆ ಎನ್ನಲಾಗಿದೆ.

ಗಂಭೀರವಾಗಿ ಗಾಯಗೊಂಡ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸಂಜೆ 5 ಗಂಟೆ ಸುಮಾರಿಗೆ ಪತ್ನಿ ಕರೆ ಮಾಡಿದಾಗ ಅಪರಿಚಿತ ವ್ಯಕ್ತಿಯೊಬ್ಬರು ಕರೆ ಸ್ವೀಕರಿಸಿ ಘಟನೆ ಬಗ್ಗೆ ಮಾಹಿತಿ ನೀಡಿದ್ದರು. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೂಡ್ಲಪ್ಪ ಅವರು ಮಾತನಾಡುವ ಸ್ಥಿತಿಯಲ್ಲಿರಲಿಲ್ಲ. ಬಳಿಕ ರಾತ್ರಿ ವೈದ್ಯರು ಪರೀಕ್ಷಿಸಿ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಈ ಘಟನೆಗೆ ಸಂಬಂಧಿಸಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!