Monday, November 9, 2026
Homeಕರಾವಳಿಸಕ್ಕರೆ ಮೂಟೆಗಳನ್ನು ಸಾಗಿಸುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ

ಸಕ್ಕರೆ ಮೂಟೆಗಳನ್ನು ಸಾಗಿಸುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ

- Advertisement -
- Advertisement -

ಮಂಗಳೂರು: ಸಕ್ಕರೆ ಮೂಟೆಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಡೀಲ್ ಬಳಿ ಪಲ್ಟಿಯಾದ ಘಟನೆ ರವಿವಾರ ರಾತ್ರಿ ನಡೆದಿದೆ.

ಅಪಘಾತದಲ್ಲಿ ಲಾರಿ ಚಾಲಕ ಗಾಯಗೊಂಡಿದ್ದಾರೆ.ಮಂಗಳೂರಿನಿಂದ ಬೆಂಗಳೂರಿನತ್ತ ತೆರಳುತ್ತಿದ್ದ ಲಾರಿ ಪಡೀಲ್ ಜಂಕ್ಷನ್‌ನ ಇಳಿಜಾರು ರಸ್ತೆಯಲ್ಲಿ ಸಂಚರಿಸುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಎಡಬದಿಗೆ ಮಗುಚಿ ಬಿದ್ದಿದೆ. ಪರಿಣಾಮ ಲಾರಿಯಲ್ಲಿದ್ದ ಸಕ್ಕರೆ ಮೂಟೆಗಳು ರಸ್ತೆಯುದ್ದಕ್ಕೂ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ.ಅಪಘಾತ ಸಂಭವಿಸಿದ ಸ್ಥಳದ ಸಮೀಪದಲ್ಲೇ ವಿದ್ಯುತ್ ಪರಿವರ್ತಕವಿದ್ದು, ಲಾರಿ ಅದರತ್ತ ಸಾಗಿದ್ದರೆ ದೊಡ್ಡ ಅನಾಹುತ ಸಂಭವಿಸುವ ಸಾಧ್ಯತೆಯಿತ್ತು.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಕಂಕನಾಡಿ ನಗರ ಠಾಣೆ ಹಾಗೂ ದಕ್ಷಿಣ ಸಂಚಾರ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದಿಂದಾಗಿ ಪಡೀಲ್ ಜಂಕ್ಷನ್ ವ್ಯಾಪ್ತಿಯ ಹೆದ್ದಾರಿಯಲ್ಲಿ ಕೆಲಕಾಲ ವಾಹನ ಸಂಚಾರದಲ್ಲಿ ಅಡಚಣೆ ಉಂಟಾಗಿತ್ತು.

- Advertisement -

Latest News

error: Content is protected !!