- Advertisement -


- Advertisement -
ಬೆಳ್ತಂಗಡಿ : ಚರ್ಚ್ ರೋಡ್ ನಲ್ಲಿ ಗೂಡ್ಸ್ ಟೆಂಪೋ ಹಾಗೂ ಎರಡು ದ್ವಿಚಕ್ರ ವಾಹನಗಳ ಮಧ್ಯೆ ನ.11 ರಂದು ಮುಂಜಾನೆ ಅಪಘಾತ ಸಂಭವಿಸಿ ಸ್ಕೂಟರ್ ಸವಾರ ನಾವೂರಿನ ಸಂತೋಷ್ (32) ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದರು. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯೋಗ ದೀಪ ಪ್ರಿಂಟರ್ಸ್ ನ ಮಾಲಕ ಕಣಿಯೂರು ಗ್ರಾಮದ ಪಿಲಿಗೂಡು ನಿವಾಸಿ ಮೋಹನ್ (33) ಅವರು ಕೂಡ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.
ಮಂಗಳೂರಿನಿಂದ ಚಿಕ್ಕಮಗಳೂರು ಕಡೆ ಹೋಗುತ್ತಿದ್ದ ಟಾಟಾ ಗೂಡ್ಸ್ ವಾಹನ ಹಾಗೂ ಗುರುವಾಯನಕೆರೆ ಕಡೆ ಹೋಗುತ್ತಿದ್ದ ಎರಡು ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದಿತ್ತು. ಗೂಡ್ಸ್ ಚಾಲಕ ನಿದ್ರೆಯ ಮಂಪರಿನಲ್ಲಿದ್ದ ಎನ್ನಲಾಗಿದೆ.
- Advertisement -


