Wednesday, November 11, 2026
Homeಕರಾವಳಿಉಡುಪಿರಸ್ತೆಯಲ್ಲಿ ಪಟಾಕಿ ಸಿಡಿಸಿ ಸಾರ್ವಜನಿಕರಿಗೆ ತೊಂದರೆ; 15 ಮಂದಿಯ ವಿರುದ್ಧ ಪ್ರಕರಣ ದಾಖಲು

ರಸ್ತೆಯಲ್ಲಿ ಪಟಾಕಿ ಸಿಡಿಸಿ ಸಾರ್ವಜನಿಕರಿಗೆ ತೊಂದರೆ; 15 ಮಂದಿಯ ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ಉಡುಪಿ: ಸಾರ್ವಜನಿಕ ರಸ್ತೆಯಲ್ಲಿ ಅಜಾಗರೂಕತೆಯಿಂದ ಪಟಾಕಿ ಸಿಡಿಸಿ, ಸಾರ್ವಜನಿಕರು ಹಾಗೂ ವಾಹನ ಸವಾರರ ಮೇಲೆ ಎಸೆದು ಉಪಟಳ ಉಂಟುಮಾಡಿದ ಆರೋಪದ ಮೇಲೆ 15 ಮಂದಿಯ ವಿರುದ್ಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನವೆಂಬರ್ 8ರಂದು ರಾತ್ರಿ 11 ಗಂಟೆ ಸುಮಾರಿಗೆ ಉಡುಪಿ ತಾಲೂಕಿನ ಶಿವಳ್ಳಿ ಗ್ರಾಮದ ಮಾಂಡವಿ ಎಮರಾಲ್ಡ್ ಅಪಾರ್ಟ್‌ಮೆಂಟ್ ಎದುರಿನ ಸಾರ್ವಜನಿಕ ರಸ್ತೆಯಲ್ಲಿ 15ರಿಂದ 20 ಮಂದಿ ಗುಂಪಾಗಿ ಸೇರಿ ಪಟಾಕಿ ಸಿಡಿಸುತ್ತಿದ್ದರು. ಈ ವೇಳೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಸಾರ್ವಜನಿಕರು, ವಾಹನ ಸವಾರರು ಹಾಗೂ ವಾಹನಗಳ ಮೇಲೆ ಪಟಾಕಿಗಳನ್ನು ಎಸೆದು ತೊಂದರೆ ನೀಡುತ್ತಿದ್ದರು ಎನ್ನಲಾಗಿದೆ.

ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಮಣಿಪಾಲ ಪೊಲೀಸರು, ಆರೋಪಿತರು ಪಟಾಕಿ ಸಿಡಿಸುವುದನ್ನು ಮುಂದುವರಿಸಿದ್ದಲ್ಲದೆ, ಕೈಯಲ್ಲಿ ಪಟಾಕಿ ಹಿಡಿದು ಸಾರ್ವಜನಿಕರು ಹಾಗೂ ವಾಹನಗಳ ಮೇಲೆ ಎಸೆಯುತ್ತಿರುವುದನ್ನು ಗಮನಿಸಿದ್ದಾರೆ. ಈ ಕೃತ್ಯದಿಂದ ಅನಿಲ್, ಕೀರ್ತಿ, ಡೆನಿಸ್, ರವಿಶೆಟ್ಟಿ ಮತ್ತು ಜ್ಞಾನೇಶ್ವರ ಎಂಬವರು ತೊಂದರೆಗೊಳಗಾಗಿದ್ದು, ಘಟನೆಯ ಪ್ರತ್ಯಕ್ಷ ಸಾಕ್ಷಿಗಳಾಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಇದಲ್ಲದೆ, ಕರ್ತವ್ಯದಲ್ಲಿದ್ದ ಸಮವಸ್ತ್ರಧಾರಿ ಪೊಲೀಸರ ಸೂಚನೆಗಳನ್ನು ನಿರ್ಲಕ್ಷಿಸಿ, ಅವರ ಮೇಲೆಯೂ ಪಟಾಕಿ ಎಸೆದು ಬೆದರಿಕೆ ಹಾಕುವ ಮೂಲಕ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ ಕೇಳಿಬಂದಿದೆ.

ಈ ಸಂಬಂಧ ಪೊಲೀಸ್ ಉಪನಿರೀಕ್ಷಕ ಶಂಭುಲಿಂಗಯ್ಯ ಎಂ.ಈ. ಅವರು ದೂರು ನೀಡಿದ್ದು, ನ್ಯಾಯಾಲಯದ ಅನುಮತಿ ಪಡೆದು ಆರ್ಯನ್ ಕುಮಾರ್, ಆದಿತ್ಯ ಪ್ರಜಾಪತಿ, ಪ್ರಿಯಾಂಶ್, ಸಿದ್ದಾಂತ್ ಸಿಂಗ್, ಪ್ರಿಯಜಿತ್ ಸಿಂಗ್ ಸೇರಿದಂತೆ ಒಟ್ಟು 15 ಮಂದಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಭಾರತೀಯ ನ್ಯಾಯ ಸಂಹಿತೆಯ ಕಲಂ 224, 292 ಹಾಗೂ 3(5)ರ ಅಡಿಯಲ್ಲಿ ಅ.ಕ್ರ. 184/2026ರಂತೆ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!