Wednesday, November 11, 2026
Homeಅಪರಾಧಪಟಾಕಿ ಸಿಡಿಸುವ ವಿಚಾರವಾಗಿ ನಡೆದ ಗಲಾಟೆ ಯುವಕನ ಸಾವಿನಲ್ಲಿ ಅಂತ್ಯ

ಪಟಾಕಿ ಸಿಡಿಸುವ ವಿಚಾರವಾಗಿ ನಡೆದ ಗಲಾಟೆ ಯುವಕನ ಸಾವಿನಲ್ಲಿ ಅಂತ್ಯ

- Advertisement -
- Advertisement -

ಮುಂಬೈ: ಪಟಾಕಿ ಸಿಡಿಸುವ ವಿಚಾರವಾಗಿ ನಡೆದ ಗಲಾಟೆಯಲ್ಲಿ 19 ವರ್ಷದ ಯುವಕನೊಬ್ಬ ಮೃತಪಟ್ಟಿರುವ ಘಟನೆ ಮುಂಬೈನ ಜುಹು ಪ್ರದೇಶದಲ್ಲಿ ನಡೆದಿದೆ.

ಲಕ್ಷ್ಮೀ ಪೂಜೆಯ ದಿನ ವಿಕ್ರಮ್ ಮೈದಾನದ ರಸ್ತೆ ಬಳಿ ಈ ಘಟನೆ ನಡೆದಿದೆ. ಮೃತ ಯುವಕನನ್ನು ಜುಹು ನಿವಾಸಿ ನನು ಅಲಿಯಾಸ್ ಶುಭಂಕರ್ ಮುಖಿಯಾ ಎಂದು ಗುರುತಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಓರ್ವ ಅಪ್ರಾಪ್ತನನ್ನು ವಶಕ್ಕೆ ಪಡೆದಿದ್ದಾರೆ.

ಪೊಲೀಸರ ಪ್ರಕಾರ, ಆರೋಪಿಗಳು ರಸ್ತೆಯಲ್ಲಿ ಪಟಾಕಿ ಸಿಡಿಸುತ್ತಿದ್ದರು. ಈ ವೇಳೆ ತನ್ನ ದ್ವಿಚಕ್ರ ವಾಹನದ ಹತ್ತಿರ ಪಟಾಕಿ ಸಿಡಿಸದಂತೆ ಶುಭಂಕರ್ ಮನವಿ ಮಾಡಿದ್ದಾನೆ. ಆದರೆ, ಆರೋಪಿಗಳು ಇದನ್ನು ನಿರ್ಲಕ್ಷಿಸಿ ಪಟಾಕಿ ಸಿಡಿಸುವುದನ್ನು ಮುಂದುವರಿಸಿದ್ದಾರೆ. ಈ ವಿಚಾರವಾಗಿ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದ್ದು, ಬಳಿಕ ಆರೋಪಿಗಳು ಯುವಕನ ಮೇಲೆ ಹಲ್ಲೆ ನಡೆಸಿದ್ದಾರೆ. ಈ ವೇಳೆ ಆತನನ್ನು ಬಲವಾಗಿ ಕೆಳಕ್ಕೆ ತಳ್ಳಲಾಗಿದ್ದು, ತೀವ್ರ ಗಾಯಗೊಂಡಿದ್ದಾನೆ.

ಕೂಡಲೇ ಸ್ಥಳೀಯರು ಯುವಕನನ್ನು ಆಸ್ಪತ್ರೆಗೆ ಕರೆದೊಯ್ದರೂ, ಅಷ್ಟರಲ್ಲೇ ಆತ ಮೃತಪಟ್ಟಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ. ಮೃತನ ಸ್ನೇಹಿತ ವಿವೇಕ್ ಸಿಂಗ್ ನೀಡಿದ ದೂರಿನ ಮೇರೆಗೆ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಘಟನೆಯ ಬಳಿಕ ಆರೋಪಿಗಳು ವಾಹನದಲ್ಲಿ ಸ್ಥಳದಿಂದ ಪರಾರಿಯಾಗಿದ್ದರು. ಸಿಸಿಟಿವಿ ದೃಶ್ಯಾವಳಿಗಳ ಆಧಾರದಲ್ಲಿ ತನಿಖೆ ನಡೆಸಿದ ಪೊಲೀಸರು ರಾಹುಲ್ ಸಂತೋಷ್ ಮಂಡಲ್ (23) ಮತ್ತು ರವಿಕುಮಾರ್ ಶರ್ವಣನ್ ದೇವೇಂದ್ರ (22) ಎಂಬುವವರನ್ನು ಬಂಧಿಸಿದ್ದಾರೆ. ಓರ್ವ ಅಪ್ರಾಪ್ತನನ್ನೂ ವಶಕ್ಕೆ ಪಡೆದಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ.

- Advertisement -

Latest News

error: Content is protected !!