
ಮಂಗಳೂರು: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಇಳಿಕೆಯಾಗಿದ್ದರೂ ದೇಶದಲ್ಲಿ ಪೆಟ್ರೋಲ್ ಬೆಲೆ ಏರಿಕೆಯಾಗುತ್ತಿರುವುದನ್ನು ಖಂಡಿಸಿ ಪದ್ಮರಾಜ್ ಅವರು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಈ ಹಿಂದೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಬ್ಯಾರೆಲ್ಗೆ 147 ಡಾಲರ್ಗೆ ಏರಿಕೆಯಾಗಿದ್ದಾಗಲೂ ಯುಪಿಎ ಸರ್ಕಾರ ಪೆಟ್ರೋಲ್ ಅನ್ನು 62 ರೂ.ಗೆ ಮಾರಾಟ ಮಾಡಿತ್ತು. ಆದರೆ ಕೊರೊನಾ ಅವಧಿಯಲ್ಲಿ ಕಚ್ಚಾ ತೈಲದ ಬೆಲೆ ಬ್ಯಾರೆಲ್ಗೆ 23 ಡಾಲರ್ಗೆ ಕುಸಿದಿದ್ದರೂ ಕೇಂದ್ರ ಸರ್ಕಾರ ಪೆಟ್ರೋಲ್ ಬೆಲೆಯನ್ನು 70 ರೂ.ಗಿಂತ ಕೆಳಗೆ ಇಳಿಸಲಿಲ್ಲ ಎಂದು ಅವರು ಆರೋಪಿಸಿದರು.
ಬಿಜೆಪಿ ಆಡಳಿತದ ಅಂತ್ಯಕಾಲ ಆರಂಭವಾಗಿದ್ದು, ಚುನಾವಣಾ ಆಯೋಗವನ್ನು ಆಡಳಿತ ಪಕ್ಷದ ಅನುಕೂಲಕ್ಕೆ ತಕ್ಕಂತೆ ಬಳಸಿಕೊಳ್ಳಲಾಗುತ್ತಿದೆ. ರಾಷ್ಟ್ರೀಯ ಮಾಧ್ಯಮಗಳು ಕೂಡ ಆಡಳಿತ ಪಕ್ಷದ ಪರವಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಪದ್ಮರಾಜ್ ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ನೀರಜ್ಪಾಲ್, ಟಿ.ಕೆ. ಸುಧೀರ್, ಅಪ್ಪಿ, ನಝೀರ್ ಬಜಾಲ್, ಸಲೀಂ, ಉದಯ ಕುಂದರ್ ಹಾಗೂ ಪ್ರಕಾಶ್ ಸಾಲಿಯಾನ್ ಉಪಸ್ಥಿತರಿದ್ದರು.


