Thursday, November 12, 2026
Homeಪ್ರಮುಖ-ಸುದ್ದಿನ.13ರಂದು ರಾಜ್ಯಕ್ಕೆ ಮೋದಿ ಭೇಟಿ; ಪ್ರಧಾನಿ ಮೋದಿ ಸ್ವಾಗತಕ್ಕೆ ಬಿಜೆಪಿ ಸಿದ್ಧತೆ; ಆರ್.ಅಶೋಕ್ ನೇತೃತ್ವದಲ್ಲಿ ಪೂರ್ವಭಾವಿ...

ನ.13ರಂದು ರಾಜ್ಯಕ್ಕೆ ಮೋದಿ ಭೇಟಿ; ಪ್ರಧಾನಿ ಮೋದಿ ಸ್ವಾಗತಕ್ಕೆ ಬಿಜೆಪಿ ಸಿದ್ಧತೆ; ಆರ್.ಅಶೋಕ್ ನೇತೃತ್ವದಲ್ಲಿ ಪೂರ್ವಭಾವಿ ಸಭೆ

- Advertisement -
- Advertisement -

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್ 13ರಂದು ಕರ್ನಾಟಕದ ವಿವಿಧ ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ, ಉದ್ಘಾಟನೆ ಹಾಗೂ ರಾಷ್ಟ್ರಕ್ಕೆ ಸಮರ್ಪಣೆ ಮಾಡುವ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಇದೇ ವೇಳೆ ಬೆಂಗಳೂರಿನ ‘ಪಿಂಕ್ ಲೈನ್’ ಮೆಟ್ರೋ ಮಾರ್ಗಕ್ಕೂ ಚಾಲನೆ ನೀಡಲಿದ್ದಾರೆ.

ಪ್ರಧಾನಿಯವರ ಭೇಟಿಯ ಹಿನ್ನೆಲೆಯಲ್ಲಿ ಅವರಿಗೆ ಅದ್ಧೂರಿ ಸ್ವಾಗತ ನೀಡಲು ಹಾಗೂ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಕೈಗೊಳ್ಳಬೇಕಾದ ಸಿದ್ಧತೆಗಳ ಕುರಿತು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ ಪೂರ್ವಭಾವಿ ಸಭೆ ನಡೆಯಿತು.

ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಆರ್. ಅಶೋಕ್ ಅವರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಪ್ರಧಾನಿ ಸ್ವಾಗತ ಮತ್ತು ಕಾರ್ಯಕ್ರಮದ ವ್ಯವಸ್ಥೆಗಳ ಕುರಿತು ಸುದೀರ್ಘ ಚರ್ಚೆ ನಡೆಸಲಾಯಿತು. ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದ ಶಾಸಕ ಕೆ. ಗೋಪಾಲಯ್ಯ ಸೇರಿದಂತೆ ಶಾಸಕರಾದ ಉದಯ್ ಗರುಡಾಚಾರ್, ಸಿ.ಕೆ. ರಾಮಮೂರ್ತಿ ಹಾಗೂ ರವಿ ಸುಬ್ರಹ್ಮಣ್ಯ ಸಭೆಯಲ್ಲಿ ಉಪಸ್ಥಿತರಿದ್ದು ಸಲಹೆಗಳನ್ನು ನೀಡಿದರು.

ಇದರೊಂದಿಗೆ ಬಿಜೆಪಿ ಜಿಲ್ಲಾಧ್ಯಕ್ಷರಾದ ಎಸ್. ಹರೀಶ್, ಸಪ್ತಗಿರಿ ಗೌಡ, ಪಕ್ಷದ ಹಿರಿಯ ಮುಖಂಡರು, ಪ್ರಮುಖರು ಹಾಗೂ ಹೆಚ್ಚಿನ ಸಂಖ್ಯೆಯ ಕಾರ್ಯಕರ್ತರು ಭಾಗವಹಿಸಿದ್ದರು.

ಪ್ರಧಾನಿ ಮೋದಿ ಅವರ ಭೇಟಿಯನ್ನು ಯಶಸ್ವಿಗೊಳಿಸುವ ಜೊತೆಗೆ ಪಕ್ಷದ ವತಿಯಿಂದ ಭವ್ಯ ಸ್ವಾಗತ ನೀಡಲು ಸಭೆಯಲ್ಲಿ ಹಲವು ನಿರ್ಧಾರಗಳನ್ನು ಕೈಗೊಳ್ಳಲಾಯಿತು. ಕಾರ್ಯಕ್ರಮದ ಸಿದ್ಧತೆಗಳಿಗಾಗಿ ಕಾರ್ಯಕರ್ತರಿಗೆ ವಿವಿಧ ಜವಾಬ್ದಾರಿಗಳನ್ನು ಹಂಚಿಕೆ ಮಾಡಲಾಯಿತು.

- Advertisement -

Latest News

error: Content is protected !!