Friday, November 13, 2026
Homeಕರಾವಳಿಉಡುಪಿಕಾಲ್ತೋಡಿನಲ್ಲಿ ಅಕ್ರಮ ಕೆಂಪು ಕಲ್ಲು ಗಣಿಗಾರಿಕೆ; ದಾಳಿಯ ಮೂರೇ ದಿನಕ್ಕೆ ಮತ್ತೆ ಕಾರ್ಯಾರಂಭ!; ಅಧಿಕಾರಿಗಳಿಂದ ಮತ್ತೊಮ್ಮೆ...

ಕಾಲ್ತೋಡಿನಲ್ಲಿ ಅಕ್ರಮ ಕೆಂಪು ಕಲ್ಲು ಗಣಿಗಾರಿಕೆ; ದಾಳಿಯ ಮೂರೇ ದಿನಕ್ಕೆ ಮತ್ತೆ ಕಾರ್ಯಾರಂಭ!; ಅಧಿಕಾರಿಗಳಿಂದ ಮತ್ತೊಮ್ಮೆ ದಾಳಿ

- Advertisement -
- Advertisement -

ಉಡುಪಿ ಜಿಲ್ಲೆಯ ಕಾಲ್ತೋಡು ಗ್ರಾಮದ ಬ್ಯಾಟ್ಯಾಣಿ ಪ್ರದೇಶದಲ್ಲಿ ನಡೆಯುತ್ತಿದ್ದ ಅಕ್ರಮ ಕೆಂಪು ಕಲ್ಲು ಗಣಿಗಾರಿಕೆ ವಿರುದ್ಧ ಗಣಿ ಮತ್ತು ಪೊಲೀಸ್ ಇಲಾಖೆ ಮತ್ತೊಮ್ಮೆ ದಾಳಿ ನಡೆಸಿದೆ.

ಸರ್ಕಾರಿ ಜಾಗದಲ್ಲಿ ಯಾವುದೇ ಪರವಾನಗಿ ಇಲ್ಲದೆ ಹಲವು ವರ್ಷಗಳಿಂದ ಗಣಿಗಾರಿಕೆ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಕೆಲವು ವಾರಗಳ ಹಿಂದೆ ದಾಳಿ ನಡೆಸಿದ್ದ ಅಧಿಕಾರಿಗಳು, ಗಣಿಗಾರಿಕೆಗೆ ಬಳಸುತ್ತಿದ್ದ ಯಂತ್ರೋಪಕರಣ ಮತ್ತು ವಾಹನಗಳನ್ನು ವಶಪಡಿಸಿಕೊಂಡಿದ್ದರು. ಆದರೆ ದಾಳಿಯಾದ ಕೇವಲ ಮೂರು ದಿನಗಳಲ್ಲೇ ಮತ್ತೆ ಗಣಿಗಾರಿಕೆ ಆರಂಭವಾಗಿತ್ತು ಎನ್ನಲಾಗಿದೆ.

ಸ್ಥಳೀಯರ ನಿರಂತರ ಒತ್ತಾಯದ ಮೇರೆಗೆ ಮತ್ತೊಮ್ಮೆ ದಾಳಿ ನಡೆಸಿದ ಅಧಿಕಾರಿಗಳು, 294 ಮೆಟ್ರಿಕ್ ಟನ್ ಕಲ್ಲು ಕಳವು ಪ್ರಕರಣ ದಾಖಲಿಸಿದ್ದಾರೆ. ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ಎಕರೆಗಟ್ಟಲೆ ಭೂಮಿ ನಾಶವಾಗುತ್ತಿದ್ದರೂ, ಗಣಿಗಾರಿಕೆಯ ಹಿಂದೆ ಇರುವ ಪ್ರಭಾವಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳದಿರುವುದಕ್ಕೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನೂರಾರು ಕೋಟಿ ರೂಪಾಯಿ ಮೌಲ್ಯದ ಕಲ್ಲು ಕಳವು ಹಾಗೂ ಪರಿಸರ ನಾಶದ ಆರೋಪದ ಕುರಿತು ಲೋಕಾಯುಕ್ತರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ಸಮಗ್ರ ತನಿಖೆ ನಡೆಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

- Advertisement -

Latest News

error: Content is protected !!