- Advertisement -


- Advertisement -
ಮಣಿಪಾಲದಲ್ಲಿ ವೇಶ್ಯಾವಾಟಿಕೆ ನಡೆಸಲು ಪಶ್ಚಿಮ ಬಂಗಾಳದಿಂದ ಮಹಿಳೆಯರನ್ನು ಕರೆತರುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಕಳೆದ ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯ ಸಿಲಿಗುರಿಯಲ್ಲಿ ಎಸ್ತಾರ್ ಶಾಹ ಅಲಿಯಾಸ್ ಕಾಜಲ್ (40) ಮತ್ತು ಸಂಜಯ್ (49) ಬಂಧಿತ ಆರೋಪಿಗಳು.
2025ರಲ್ಲಿ ಆರೋಪಿಗಳು ಪಶ್ಚಿಮ ಬಂಗಾಳದಿಂದ ಮಹಿಳೆಯರನ್ನು ಕರೆತಂದು ಮಣಿಪಾಲದಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದರು. ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ ಮಹಿಳೆಯರನ್ನು ರಕ್ಷಿಸಿದ್ದರು. ಆದರೆ, ಈ ವೇಳೆ ಇಬ್ಬರು ಆರೋಪಿಗಳು ಪರಾರಿಯಾಗಿದ್ದರು.
ಇದೀಗ ಇನ್ಸ್ಪೆಕ್ಟರ್ ಮಹೇಶ್ ಪ್ರಸಾದ್ ನೇತೃತ್ವದ ಪೊಲೀಸ್ ತಂಡ ಸಿಲಿಗುರಿಗೆ ತೆರಳಿ ಆರೋಪಿಗಳನ್ನು ಬಂಧಿಸಿದೆ. ಬಳಿಕ ಅವರನ್ನು ಉಡುಪಿಯ ನ್ಯಾಯಾಲಯಕ್ಕೆ ಹಾಜರುಪಡಿಸಿ, ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ.
- Advertisement -


